ನೋಯ್ಡಾ: ರಾಷ್ಟ್ರರಾಜಧಾನಿ ದೆಹಲಿಯ ನೋಯ್ಡಾದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಹಾಡಹಗಲೇ ಉದ್ಯಾನವನದಲ್ಲಿ ಯುವತಿ ಮೇಲೆ ದುಷ್ಕರ್ಮಿಗಳ ತಂಡ ದುಷ್ಕೃತ್ಯ ಎಸಗಿದೆ.
ನೋಯ್ಡಾದ ಪಾರ್ಕ್ವೊಂದರಲ್ಲಿ ಯುವತಿ ಮೇಲೆ ಆರು ಮಂದಿ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿದೆ. ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು ಇಬ್ಬರು ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗಿದೆ.
ಸಂತ್ರಸ್ತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಕೆಲ ವರ್ಷಗಳ ಹಿಂದೆ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಹಾಗು ಹತ್ಯೆ ಪ್ರಕರಣ ಜನಮಾನಸದಿಂದ ಮಾಸುವ ಮುನ್ನವೇ ಇದೀಗ ಅಂತಹದ್ದೇ ಮತ್ತೊಂದು ಪ್ರಕರಣಕ್ಕೆ ರಾಷ್ಟ್ರ ರಾಜಧಾನಿ ಸಾಕ್ಷಿಯಾಗಿದೆ.