ETV Bharat / bharat

ನಾಲ್ಕು ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ... ಕಾರಣ!? - ದೆಹಲಿ ಇತ್ತೀಚಿನ ಕ್ರೈಂ ಸುದ್ದಿ

ವಿವಾಹಿತ ಮಹಿಳೆಯೋರ್ವಳು ನಾಲ್ಕು ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನೋಯ್ಡಾದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

woman commits suicide
woman commits suicide
author img

By

Published : Nov 7, 2020, 7:53 PM IST

ನೋಯ್ಡಾ( ಉತ್ತರ ಪ್ರದೇಶ): ಮಹಿಳೆಯೋರ್ವಳು 4 ವರ್ಷದ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ನೋಯ್ಡಾದಲ್ಲಿ ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಬಿಲ್ಡಿಂಗ್​ವೊಂದರ 17ನೇ ಮಹಡಿಯಿಂದ ಜಿಗಿದು ಮಹಿಳೆ ತನ್ನ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈಕೆಯ ಗಂಡ ದೂರದ ಮುರಾದಾಬಾದ್​ನಲ್ಲಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಹಿಳೆ ದಿಢೀರ್​ ನಿರ್ಧಾರ ಕೈಗೊಂಡಿದ್ದು, ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ನೋಯ್ಡಾ ಡೆಪ್ಯುಟಿ ಪೊಲೀಸ್​ ಕಮಿಷನರ್​​ ಅಂಕೂರ್​ ಅಗರವಾಲ್​ ತಿಳಿಸಿದ್ದಾರೆ.

ಮನೆಯಲ್ಲಿದ್ದ ನಾದಿನಿ ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದು, ಈ ವೇಳೆ ಈ ಕೃತ್ಯಕ್ಕೆ ಕೈಹಾಕಿದ್ದಾಳೆ. ಮೃತದೇಹಗಳನ್ನ ಈಗಾಗಲೇ ಮರಣೋತ್ತರ ಪರೀಕ್ಷೆಗೋಸ್ಕರ ರವಾನೆ ಮಾಡಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.