ಮಾಲ್ಕಂಗಿರಿ (ಒಡಿಶಾ): ಹೆರಿಗೆ ನೋವಿನಿಂದ ತೀವ್ರ ಸ್ವರೂಪದ ನೋವು ಅನುಭವಿಸುತ್ತಿದ್ದ ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದ ವೈದ್ಯರ ತಂಡ ಬರೋಬ್ಬರಿ 30 ಕಿ.ಲೋ ಮೀಟರ್ ಹೆಗಲ ಮೇಲೆ ಹೊತ್ತುಕೊಂಡು ಸಾಗಿರುವ ಘಟನೆ ನಡೆದಿದೆ.
ಒಡಿಶಾದ ಮಾವೋವಾದಿ ಪೀಡಿತ ಮಾಲ್ಕಂಗಿರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೇಲ್ವಿಚಾರಣೆಗೆ ಡಾ.ರಾಧೇಶ್ವರ್ ಜೆನಾ ಸೇರಿದಂತೆ ಐವರ ಸದಸ್ಯರ ತಂಡ ಕಡಿತುಲಗುಂತಿ ಗ್ರಾಮದಲ್ಲಿದ್ದರು. ಈ ವೇಳೆ ಗರ್ಭಿಣಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದರು. ಆ ಬಗ್ಗೆ ಮಾಹಿತಿ ಪಡೆದುಕೊಂಡು ಸ್ಥಳಕ್ಕೆ ತೆರಳಿದ ಅವರು ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಈ ವೇಳೆ ಆಂಬ್ಯುಲೆನ್ಸ್ಗೆ ಕರೆ ಮಾಡಿದ್ದಾರೆ. ಈ ಹಳ್ಳಿಗೆ ತಲುಪಲು ಸಾಧ್ಯವಿಲ್ಲ ಎಂದು ಹೇಳಿದ್ದರಿಂದ ಬೇರೆ ಯಾವುದೇ ಆಯ್ಕೆಯಿಲ್ಲದೇ ಸ್ಟ್ರೆಚರ್ನಲ್ಲಿ ಗರ್ಭಿಣಿಯನ್ನು ಮಲಗಿಸಿ ಸುಮಾರು 30 ಕಿ.ಮೀ ದೂರದ ಆಸ್ಪತ್ರೆಗೆ ಹೊತ್ತುಕೊಂಡು ಸಾಗಿದ್ದಾರೆ. ಸದ್ಯ ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ.