ನವದೆಹಲಿ: ಮಾಯಾವತಿ ಅವರ ತಂದೆ ಪ್ರಭು ದಯಾಳ್ ಅವರು ಗುರುವಾರ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಿಧನಕ್ಕೆ ಸಂತಾಪ ಸೂಚಿಸಲು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿಗೆ ಕರೆ ಮಾಡಿದ್ದರು. ಅವರ ತಂದೆಯ ನಿಧನಕ್ಕೆ ಸಂತಾಪ ಸೂಚಿಸಿದರು. ಮಾಯಾವತಿ ಅವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಕೋರಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಕೂಡ ಮಾಯಾವತಿ ಅವರ ತಂದೆಯ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಪ್ರಭು ದಯಾಳ್ ಅವರ ನಿಧನ ತುಂಬಾ ದುಃಖಕರವಾಗಿದೆ. ಮಾಯಾವತಿ ಮತ್ತು ಸವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಪ್ರಭು ದಯಾಳ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಾನ್ ರಾಮನನ್ನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡ ಪ್ರಭು ದಯಾಳ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮಾಯಾವತಿ ಅವರ ತಂದೆ 95 ವರ್ಷದ ಪ್ರಭು ದಯಾಳ್ ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ವಿಧಿವಶರಾಗಿದ್ದಾರೆ. ನಮ್ಮ ಪಕ್ಷದ ಅಧ್ಯಕ್ಷೆ ಮಾಯಾವತಿ ಅವರ ತಂದೆ ಪ್ರಭು ದಯಾಳ್ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ಪಕ್ಷವು ನಿಮಗೆ ತಿಳಿಸಲು ಬಯಸುತ್ತದೆ. ಅವರ ಆತ್ಮಕ್ಕೆ ಶಾಂತಿ ಕೋರಲು ಪಕ್ಷದ ಎಲ್ಲ ಸದಸ್ಯರಿಗೂ ಕೋರಲಾಗಿದೆ ಎಂದು ಬಹುಜನ ಸಮಾಜ ಪಕ್ಷ ಹೇಳಿಕೆ ಹೊರಡಿಸಿದೆ.