ನವದೆಹಲಿ: ಗಣರಾಜ್ಯೋತ್ಸವದಂದು ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬುಧವಾರ ವ್ಯಕ್ತಿವೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಧರ್ಮೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಅಂದು ಕೆಂಪು ಕೋಟೆಯಲ್ಲಿ ಧಾರ್ಮಿಕ ಧ್ವಜವನ್ನು ಹಾರಿಸುವಲ್ಲಿ ಈತನ ಪಾತ್ರದ ಕುರಿತು ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: ಕೆಂಪುಕೋಟೆ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಆಜಾದ್ ಒತ್ತಾಯ
ಘಟನೆ ಹಿನ್ನೆಲೆ:
ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಜನವರಿ 26 ರಂದು ರೈತ ಸಂಘಟನೆಗಳು ಟ್ರ್ಯಾಕ್ಟರ್ ಱಲಿಗೆ ಕರೆ ಕೊಟ್ಟಿದ್ದವು. ಆ ಸಂದರ್ಭ ಸಾವಿರಾರು ಪ್ರತಿಭಟನಾಕಾರರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು. ಅನೇಕ ಪ್ರತಿಭಟನಾಕಾರರು, ಟ್ರ್ಯಾಕ್ಟರ್ಗಳನ್ನು ಓಡಿಸಿ, ಕೆಂಪು ಕೋಟೆಯನ್ನು ಪ್ರವೇಶಿಸಿದ್ದರು. ನಂತರ ಧಾರ್ಮಿಕ ಧ್ವಜ ಹಾರಿಸಿದ್ದರು.