ಕಾನ್ಪುರ (ಉತ್ತರ ಪ್ರದೇಶ): ಕಟ್ಟಡದ ಮೇಲ್ಛಾವಣಿ ಕುಸಿದುಬಿದ್ದು ಓರ್ವ ಪೊಲೀಸ್ ಸಿಬ್ಬಂದಿ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ.
ಘಟನೆ ಬಗ್ಗೆ ತಮಗೆ ಬಹಳ ನೋವುಂಟಾಗಿದೆ. ಮೃತ ಸಿಬ್ಬಂದಿಯ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡಲಾಗುವುದು. ಅಂತಿಮ ವಿಧಿಗಳನ್ನು ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಕಾನ್ಪುರದ ಎಸ್ಎಸ್ಪಿ ಪ್ರತೀಂದರ್ ಸಿಂಗ್ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಗಾಯಗೊಂಡವರನ್ನು ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.