ಪುಣೆ: ಅನಿಲ ಸೋರಿಕೆಯಾಗಿ ಓರ್ವ ಕಾರ್ಮಿಕ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪುಣೆಯ ಬಾರಾಮತಿಯ ಮಾಲೆಗಾಂವ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದೆ.
ನಿನ್ನೆ ರಾತ್ರಿ ಕಾರ್ಖಾನೆಯಲ್ಲಿ ಗ್ಯಾಸ್ ಲೀಕ್ ಆದ ಬಳಿಕ 13 ಮಂದಿ ಕಾರ್ಮಿಕರು ಪ್ರಜ್ಞಾಹೀನರಾಗಿದ್ದರು. ಈ ಪೈಕಿ ಇಂದು ಮುಂಜಾನೆ 2.30ರ ವೇಳೆಗೆ ಒಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಲೆಗಾಂವ್ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ವಿಜಯ್ ವಬಲೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.