ಶೋಫಿಯಾನ್ : ಭಾರಿ ಪ್ರಮಾಣದ ದಾಳಿಗೆ ಸಂಚು ರೂಪಿಸಿದ್ದ ಓರ್ವ ಉಗ್ರನನ್ನು ಹೊಡೆದುರಿಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಉತ್ತರದ ಕಮಾಂಡೊ ಹಾಗೂ ಭಾರತೀಯ ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹೊಡೆದುರುಳಿಸಿದ್ದು, ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಜಮ್ಮು-ಕಾಶ್ಮೀರದಲ್ಲಿ ಕಳೆದ ಐದು ತಿಂಗಳಲ್ಲಿ 101 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ದೇಶದಲ್ಲಿ ದಿನೇ ದಿನೇ ಉಗ್ರರ ನುಸುಳುವಿಕೆ ಸಂಖೈ ಹೆಚ್ಚಾಗುತ್ತಿದೆ. ಆದರೂ ಕೂಡ ಭಾರತೀಯ ಸೇನೆ ದಿಟ್ಟ ಪ್ರತಿರೋಧ ತೋರಿ, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದಾರೆ.