ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಷೋಪಿಯನ್ ಜಿಲ್ಲೆಯ ಮೊಲು ಚಿತ್ರಗಾಂ ಪ್ರದೇಶದಲ್ಲಿ ಬೆಳ್ಳಂಬೆಳಗ್ಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದ್ದು, ಒಬ್ಬ ಉಗ್ರನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಭದ್ರತಾ ಪಡೆಯ ಕಾರ್ಯಾಚರಣೆ ಮುಂದುವರಿದಿದ್ದು, ಯೋಧರು ಉಗ್ರರಿಗಾಗಿ ಶೋಧ ನಡೆಸಿದ್ದಾರೆ. ಇನ್ನು ಇಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಶ್ಮೀರದ ಲಡಾಕ್ ಮತ್ತು ಸಿಯಾಚಿನ್ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಅದಕ್ಕೂ ಮುನ್ನವೇ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಹುತಾತ್ಮ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿ, ಸೇನಾ ಶಿಬಿರದಲ್ಲಿ ಯೋಧರ ಜತೆ ರಾಜನಾಥ್ ಸಿಂಗ್ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.