ಶ್ರೀನಗರ (ಜಮ್ಮು ಕಾಶ್ಮೀರ): ಜಮ್ಮು ಕಾಶ್ಮೀರದ ಗಾಂದೆರ್ಬಾಲ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ.
ಗಾಂದೆರ್ಬಾಲ್ ಜಿಲ್ಲೆಯ ತ್ರುಮ್ಖಲ್ ಪ್ರದೇಶದಲ್ಲಿ ಎನ್ಕೌಂಟರ್ ನಡೆದಿದೆ. ಇಂದು ಬೆಳಗ್ಗೆಯಿಂದಲೂ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆಯುತ್ತಿದೆ.
ಎನ್ಕೌಂಟರ್ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.