ಪೂಂಚ್: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಶಹ್ಪುರ್ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಉದ್ದಕ್ಕೂ ಪಾಕಿಸ್ತಾನದ ಸೈನಿಕರು, ನಾಗರಿಕ ಪ್ರದೇಶಗಳು ಮತ್ತು ಫಾರ್ವರ್ಡ್ ಪೋಸ್ಟ್‌ಗಳ ಮೇಲೆ ಭಾರಿ ಶೆಲ್ ಮತ್ತು ಗುಂಡಿನ ದಾಳಿ ನಡೆಸಿದ್ದು, ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾದ ದಾಳಿಗೆ ಭಾರತೀಯ ಪಡೆಗಳು ಸೂಕ್ತ ಪ್ರತ್ಯುತ್ತರ ನೀಡಿದ್ದು, ಎರಡೂ ಕಡೆಯಿಂದ ಗುಂಡಿನ ಕಾಳಗ ನಡೆದಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಶಹಪುರ್ ಪ್ರದೇಶದ ತಹಶೀಲ್ದಾರ್ ನರೇಶ್ ಕುಮಾರ್, ಪಾಕ್ ನಡೆಸಿದ ದಾಳಿಯಿಂದ ಓರ್ವ ನಾಗರಿಕ ಸಾವಿಗೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.