ETV Bharat / bharat

ಕಾಂಗ್ರೆಸ್​ ಮತ್ತು ಇತರೆ ಪಕ್ಷಗಳು ಸಿಎಎ ಬಗ್ಗೆ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿವೆ: ಪ್ರಮೋದ್​ ಸಾವಂತ್​​ - ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಕಾಯ್ದೆ ಸ್ವಾಗತಾರ್ಹವಾಗಿದ್ದು, ಈ ಕಾಯ್ದೆಯನ್ನು ಜನರೂ ಸಹ ಒಪ್ಪಿಕೊಳ್ಳಲು ತಯಾರಿದ್ದಾರೆ. ಆದರೆ ಕಾಂಗ್ರೆಸ್​​ ಮತ್ತು ಇತರೆ ಪಕ್ಷಗಳು ಈ ಕಾಯ್ದೆ ಬಗ್ಗೆ ಅಪಪ್ರಚಾರ ನಡೆಸಿ ಜನರಲ್ಲಿ ತಪ್ಪು ಕಲ್ಪನೆ ಮೂಡಿಸುತ್ತಿವೆ ಎಂದು ಗೋವಾ ಮುಖ್ಯಮಂತ್ರಿ ಸಾವಂತ್​​ ಆರೋಪಿಸಿದ್ದಾರೆ.

Goa Cm
ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​​
author img

By

Published : Feb 4, 2020, 6:55 PM IST

ಪಣಜಿ(ಗೋವಾ): ನಮ್ಮ ರಾಜ್ಯದ ನಾಗರೀಕರೆಲ್ಲರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಂಗೀಕರಿಸಲು ಸಿದ್ಧರಿದ್ದಾರೆ. ಆದರೆ ಕಾಂಗ್ರೆಸ್​ ಮತ್ತು ಇತರೆ ಪಕ್ಷಗಳು ಸಿಎಎ ಬಗ್ಗೆ ಅಪಪ್ರಚಾರ ನಡೆಸಿ ಜನರಲ್ಲಿ ಈ ಕಾಯ್ದೆ ಬಗ್ಗೆ ತಪ್ಪು ಕಲ್ಪನೆ ಮೂಡಿಸುತ್ತಿವೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​​ ಹೇಳಿದ್ದಾರೆ.

ಈ ಕಾಯ್ದೆಯಲ್ಲಿ ಆಕ್ಷೇಪಾರ್ಹವಾದುದು ಏನೂ ಇಲ್ಲ. ಬಿಜೆಪಿಯ 15 ಶಾಸಕರು ಹಾಗೂ ಇಲ್ಲಿನ ಪ್ರಜ್ಞಾವಂತ ಜನರು ಇದನ್ನು ಒಪ್ಪಿಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಇತರೆ ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಈ ಬಗ್ಗೆ ಅಪಪ್ರಚಾರ ನಡೆಸುತ್ತಿವೆ. ಕಾಂಗ್ರೆಸ್​​ ಪಕ್ಷದವರಿಗೂ ಸಹ ಸಿಎಎ ಬಗೆಗಿನ ನಿಜವಾದ ಅಂಶಗಳು ತಿಳಿದಿವೆ. ಇದರ ಆಗುಹೋಗುಗಳು ಸಹ ಅವರಿಗೆ ಗೊತ್ತಿರುವಂತಹದ್ದು. ಆದರೆ ಜನರ ದಿಕ್ಕು ತಪ್ಪಿಸುವ ಸಲುವಾಗಿ ಈ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಸಾವಂತ್​​ ಕಿಡಿಕಾರಿದ್ದಾರೆ.

ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​​

ಸಿಎಎ ಜಾರಿಗೆ ತಂದಿರುವುದಕ್ಕಾಗಿ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​ ಶಾ ಅವರಿಗೆ ಸೋಮವಾರ ಅಭಿನಂದನಾ ಪತ್ರವನ್ನು ಸಲ್ಲಿಸಿದೆ ಎಂದ ಸಾವಂತ್​​, ಅಭಿನಂದನಾ ಪತ್ರ ಸಲ್ಲಿಸುವುದಕ್ಕೂ ಕಾಂಗ್ರೆಸ್​ ಸದನದಲ್ಲಿ ಗದ್ದಲವನ್ನುಂಟು ಮಾಡಿದೆ. ಈ ಬಗ್ಗೆ ಎರಡೂವರೆ ಗಂಟೆಗಳ ಕಾಲ ಚರ್ಚೆ ನಡೆದಿತ್ತು ಎಂದು ಹೇಳಿದ್ದಾರೆ.

Intro:Body:

https://www.aninews.in/news/national/politics/oppn-parties-including-congress-trying-to-misguide-people-on-caa-says-goa-cm20200204060802/

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.