ನವದೆಹಲಿ: ಬಿಜೆಪಿ ಸಂಸದೀಯ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಮಾತುಗಳು ಪ್ರಸ್ತಾಪವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆ ಎಂದು ಮೋದಿ ಬಣ್ಣಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಕಿರುಕುಳ ಅನುಭವಿಸಿ ಜನರಿಗೆ ಮಸೂದೆಯನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು ಎಂದು ಮೋದಿ ಹೇಳಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.
ಸಭೆಯಲ್ಲಿ ಮಸೂದೆಗೆ ವಿರುದ್ಧವಾಗಿ ಮಾತನಾಡುತ್ತಿರುವ ಪ್ರತಿಪಕ್ಷಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಮೋದಿ, ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಪಾಕ್ ಮಾತನಾಡುತ್ತಿರುವಂತೆ ಕೆಲ ಪ್ರತಿಪಕ್ಷಗಳು ಮಾತನಾಡುತ್ತಿವೆ ಎಂದು ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
-
Sources: PM Modi in BJP Parliamentary party meeting said that some Opposition parties are speaking the same language as Pakistan on the #CitizenshipAmendmentBill pic.twitter.com/EqIcbZv0wH
— ANI (@ANI) December 11, 2019 " class="align-text-top noRightClick twitterSection" data="
">Sources: PM Modi in BJP Parliamentary party meeting said that some Opposition parties are speaking the same language as Pakistan on the #CitizenshipAmendmentBill pic.twitter.com/EqIcbZv0wH
— ANI (@ANI) December 11, 2019Sources: PM Modi in BJP Parliamentary party meeting said that some Opposition parties are speaking the same language as Pakistan on the #CitizenshipAmendmentBill pic.twitter.com/EqIcbZv0wH
— ANI (@ANI) December 11, 2019
ಇಂದು ಮಧ್ಯಾಹ್ನ 12 ಗಂಟೆಗೆ ಸಂಸತ್ತಿನ ಮೇಲ್ಮನೆಯಲ್ಲಿ ಮಸೂದೆ ಮಂಡನೆಯಾಗಲಿದೆ. ಸ್ಪಷ್ಟ ಬಹುಮತದೊಂದಿಗೆ ಮಸೂದೆಗೆ ಅಂಗೀಕಾರ ದೊರೆಯಲಿದೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.