ನವದೆಹಲಿ: ಪೂರ್ವ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಭವಿಸಿದ ಸಂಘರ್ಷದಲ್ಲಿ ಒಬ್ಬ ಸೇನಾಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾಗಿದ್ಧಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗೌರವ ಸಲ್ಲಿಕೆ ಮಾಡಿದರು.
ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಯಾವುದೇ ಕಾರಣಕ್ಕೂ ನಮ್ಮ ಯೋಧರ ಬಲಿದಾನ ವ್ಯರ್ಥವಾಗುವುದಕ್ಕೆ ಬಿಡಲ್ಲ ಎಂದು ಹೇಳಿದ್ದಾರೆ. ಭಾರತೀಯ ಯೋಧರ ಬಲಿದಾನಕ್ಕೆ ಇಡೀ ಭಾರತ ಹೆಮ್ಮೆ ಪಡುತ್ತದೆ. ನಮ್ಮ ವೀರ ಯೋಧರ ಬಲಿದಾನ ವ್ಯರ್ಥವಾಗಲು ನಾನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಭರವಸೆ ನೀಡುತ್ತೇನೆ. ನಮಗೆ, ದೇಶದ ಏಕತೆ ಮತ್ತು ಸಾರ್ವಭೌಮತ್ವ ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ವಿವಿಧ ರಾಜ್ಯದ ಸಿಎಂಗಳೊಂದಿಗೆ ವಿಡಿಯೋ ಸಂವಾದ ನಡೆಸುವುದಕ್ಕೂ ಮುಂಚಿತವಾಗಿ ವೀರ ಯೋಧರಿಗೆ ಗೌರವ ಸಲ್ಲಿಸಿದರು. ಈ ವೇಳೆ ಕೇಂದ್ರ ಸಚಿವರು ಭಾಗಿಯಾಗಿದ್ದರು.