ಮುಂಬೈ (ಮಹಾರಾಷ್ಟ್ರ): ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಯುದ್ಧದಲ್ಲಿ ಸಹಾಯ ಮಾಡಲು ಕೇರಳದಿಂದ 50 ಕ್ಕೂ ಹೆಚ್ಚು ವೈದ್ಯರು ಮತ್ತು 100 ನರ್ಸ್ಗಳು ಮುಂಬೈಗೆ ತೆರಳಲಿದ್ದಾರೆ.
ಮುಂಬೈ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಿಸುತ್ತಿದೆ. ಹೀಗಾಗಿ ಕೇರಳದ 16 ವೈದ್ಯರ ತಂಡ ಇಂದು ಮುಂಬೈ ತಲುಪಲಿದೆ ಎಂದು ತಿರುವನಂತಪುರಂ ಸರ್ಕಾರಿ ವೈದ್ಯಕೀಯ ಕಾಲೇಜಿನ ಉಪ ಅಧೀಕ್ಷಕ ಡಾ.ಸಂತೋಷ್ ಕುಮಾರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಕೇರಳದಿಂದ ಸುಮಾರು 50 ವೈದ್ಯರು ಮತ್ತು 100 ನರ್ಸ್ಗಳು ಮುಂಬೈ ತಲುಪಲಿದ್ದಾರೆ ಎಂದು ಕುಮಾರ್ ಹೇಳಿದ್ದಾರೆ.
'ಸೆವೆನ್ ಹಿಲ್ಸ್ ಆಸ್ಪತ್ರೆಯಲ್ಲಿ ಕೆಲಸ ಮಾಡಲು ಸಿಬ್ಬಂದಿ ಆಗಮಿಸುತ್ತಿದ್ದಾರೆ. ಕೋವಿಡ್-19 ವಿರುದ್ಧ ಹೋರಾಡುವ ಈ ಪ್ರಯತ್ನದಲ್ಲಿ ಸ್ವಯಂಸೇವಕರಾಗಿರಬೇಕು. ಮುಂಬೈನ ವೈದ್ಯಕೀಯ ಸಿಬ್ಬಂದಿಗೆ ಸಹಾಯ ಮಾಡಲು ಬರುವ ಎಲ್ಲ ವೈದ್ಯರು ಖಾಸಗಿ ವಲಯದಲ್ಲಿ ಕೆಲಸ ಮಾಡಲಿದ್ದಾರೆ. ಇಲ್ಲಿನವರಿಗೆ ಸಹಾಯ ಮಾಡಲು ಸ್ವಯಂಪ್ರೇರಿತರಾಗಿ ಬರುತ್ತಿದ್ದಾರೆ' ಎಂದು ಡಾ.ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ.