ಚೆನ್ನೈ: ಕೊರೊನಾ ಲಾಕ್ಡೌನ್ ಹಿನ್ನೆಲೆ ಭಾರತ ಸರ್ಕಾರ ಮಾರ್ಚ್ 25 ರಿಂದ ದೇಶಾದ್ಯಂತ ಅಂತಾರಾಷ್ಟ್ರೀಯ ವಿಮಾನಯಾನಗಳನ್ನು ನಿಷೇಧಿಸಿದೆ. ಆದಾಗ್ಯೂ, ಅಂತಾರಾಷ್ಟ್ರೀಯ ಸರಕು ವಿಮಾನಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಮತ್ತು ಕೇಂದ್ರ ಸರ್ಕಾರದ ವಿಶೇಷ ಅನುಮತಿಯೊಂದಿಗೆ 12 ದೇಶಗಳಿಗೆ ವಿಶೇಷ ವಿಮಾನಯಾನ ನಡೆಸಲಾಗುತ್ತಿದೆ.
ಸರಕು ವಿಮಾನಗಳಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗಿತ್ತು. ವಿಮಾನದಲ್ಲಿದ್ದ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿತ್ತು. ಕಳೆದ 5 ತಿಂಗಳಿನಲ್ಲಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 26 ಕೋಟಿ ರೂ. ಮೊತ್ತದ ಒಟ್ಟು 51 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ 141 ಜನರನ್ನು ಬಂಧಿಸಲಾಗಿದೆ ಎಂದು ಚೆನ್ನೈ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಚೆನ್ನೈ ವಿಮಾನ ನಿಲ್ದಾಣದ ಕಸ್ಟಮ್ಸ್ ಆಯುಕ್ತ ರಾಜನ್ ಚೌಧರಿ ನೇತೃತ್ವದ ಅಧಿಕಾರಿಗಳ ತಂಡದ ಕಾರ್ಯಾಚರಣೆಯಲ್ಲಿ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಚಿನ್ನದ ಕಳ್ಳಸಾಗಣೆ ಗ್ಯಾಂಗ್‌ಗೆ ಸಹಾಯ ಮಾಡಿದ್ದಕ್ಕಾಗಿ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಏಳು ಜನರನ್ನು ಬಂಧಿಸಲಾಗಿದೆ.