ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿಂತೆ ವಿಚಾರಣೆ ಪೂರ್ಣಗೊಳಿಸಿರುವ ಸುಪ್ರೀಂಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್‌ನ ಆದೇಶದ ವಿರುದ್ಧ ಪಿ ಚಿದಂಬರಂ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆ ಜಾಮೀನೋ ಇಲ್ಲ ಜೈಲೋ ಅಲ್ಲೋ ನಿರ್ಧಾರ ಇಂದು ಬೆಳಕ್ಕೆ 10: 30 ಕ್ಕೆ ತಿಳಿದುಬರಲಿದೆ. ನ್ಯಾಯಮೂರ್ತಿಗಳಾದ ಆರ್ ಬಾನುಮತಿ, ಎ.ಎಸ್.ಬೋಪಣ್ಣ ಮತ್ತು ಹೃಷಿಕೇಶ ರಾಯ್ ಅವರನ್ನೊಳಗೊಂಡ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಲಿದೆ.
ಪ್ರಸ್ತುತ ತಿಹಾರ್ ಜೈಲಿನಲ್ಲಿರುವ ಮಾಜಿ ಹಣಕಾಸು ಸಚಿವ ಚಿದಂಬರಂ, ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದರು. ನವೆಂಬರ್ 28 ರಂದು ದೆಹಲಿ ನ್ಯಾಯಾಲಯ ಜಾಮೀನು ಅರ್ಜಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನವನ್ನು ಡಿಸೆಂಬರ್ 11ರವರೆಗೆ ವಿಸ್ತರಣೆ ಮಾಡಿತ್ತು.
ಐಎನ್‌ಎಕ್ಸ್ ಮೀಡಿಯಾಕ್ಕೆ 305 ಕೋಟಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದ ಮೇಲೆ 2017ರ ಮೇ ನಲ್ಲಿ ಸಿಬಿಐ ಪ್ರಕರಣ ದಾಖಲು ಮಾಡಿತ್ತು. ಆಗಸ್ಟ್ 21 ರಂದು ಪಿ ಚಿದಂಬರಂ ಅವರನ್ನ ವಿಚಾರಣೆಗೆ ಒಳಪಡಿಸಿತ್ತು. ಆಗ ಜಾಮೀನು ಪಡೆದಿದ್ದ ಮಾಜಿ ಹಣಕಾಸು ಸಚಿವರನ್ನ ಅಕ್ಟೋಬರ್ 16ರಂದು ಬಂಧಿಸಲಾಗಿತ್ತು.