ಪೂಂಚ್ (ಜಮ್ಮು-ಕಾಶ್ಮೀರ) : ಪಾಕಿಸ್ತಾನವು ಸಂಜೆ 7 ಗಂಟೆ ಸುಮಾರಿಗೆ ಬಾಲಕೋಟ್ ಮತ್ತು ಮೆಂಧರ್ ವಲಯಗಳಲ್ಲಿ ಎಲ್‌ಒಸಿ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತೀಯ ಸೇನೆಯು ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ವಕ್ತಾರರು ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಬಾಲಕೋಟ್ ಮತ್ತು ಮೆಂಧರ್ ವಲಯಗಳಲ್ಲಿ ಪಾಕಿಸ್ತಾನನಡೆಸಿದ ಗುಂಡಿನ ದಾಳಿ ಮತ್ತು ಶೆಲ್ ದಾಳಿಯಲ್ಲಿ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದುಬಂದಿದೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್ಧಾರ್ ಸೆಕ್ಟರ್‌ನಲ್ಲಿ ಫಾರ್ವರ್ಡ್ ಪೋಸ್ಟ್‌ಗಳು ಮತ್ತು ಗ್ರಾಮಗಳನ್ನು ಪಾಕಿಸ್ತಾನ ಗುರಿಯಾಗಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ತಂಗ್‌ಧಾರ್ ಸೆಕ್ಟರ್‌ನಲ್ಲಿ ಗಡಿಯುದ್ದಕ್ಕೂ ಗುಂಡಿನ ದಾಳಿ ಮತ್ತು ಶೆಲ್ ದಾಳಿ ಬೆಳಗ್ಗೆ 11 ಗಂಟೆ ಸುಮಾರಿಗೆ ಶುರುವಾಯಿತು. ಸೇನೆಗೆ ಬಂದ ಕೊನೆಯ ಮಾಹಿತಿಯಂತೆ ಗುಂಡಿನ ಚಕಮಕಿ ಇನ್ನು ಮುಂದುವರೆದಿದೆ ಎಂದು ತಿಳಿದು ಬಂದಿದೆ.