ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ಪಾಕ್ ನಡುವಿನ ಉದ್ವಿಘ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಪಾಕ್ ಭಯೋತ್ಪಾದನೆಯನ್ನು ನಿಲ್ಲಿಸಿದರೆ ಮಾತ್ರ ಉಭಯ ರಾಷ್ಟ್ರಗಳ ನಡುವೆ ಯಶಸ್ವಿ ಸಂವಾದ ಸಾಧ್ಯ ಎಂಬುದನ್ನು ವೈಟ್ ಹೌಸ್ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟ್ರಂಪ್ ಭಾರತ ಭೇಟಿ ವೇಳೆ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೆ ಮಧ್ಯಸ್ಥಿಕೆ ವಹಿಸಿಕೊಳ್ಳುವ ಕುರಿತು ಮಾತುಕತೆ ನಡೆಸಲಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ವೈಟ್ಹೌಸ್ನ ಆಡಳಿತ ವಿಭಾಗದ ಹಿರಿಯ ಅಧಿಕಾರಿಯೊಬ್ಬರು, ಉಭಯ ರಾಷ್ಟ್ರಗಳ ನಡುವಿನ ಭಿನ್ನಾಭಿಪ್ರಾಯ ಹೋಗಲಾಡಿಸಲು ಎರಡೂ ರಾಷ್ಟ್ರಗಳು ಪರಸ್ಪರ ದ್ವಿಪಕ್ಷೀಯ ಮಾತುಕತೆಯಲ್ಲಿ ತೊಡಗಿಸಿಕೊಳ್ಳಲು ಅಮೆರಿಕ ಉತ್ತೇಜನ ನೀಡುತ್ತಿದೆ ಎಂದು ತಿಳಿಸಿದ್ರು.
ಉಭಯ ದೇಶಗಳ ನಡುವಿನ ಸಂಧಾನ ಪ್ರಕ್ರಿಯೆಗೆ ಪಾಕಿಸ್ತಾನ ತನ್ನ ಉಗ್ರ ಪೋಷಕ ನೀತಿಯನ್ನು ದಮನ ಮಾಡುವುದರ ಮೇಲೆ ನಿಂತಿದೆ. ಹೀಗಾಗಿ ತನ್ನ ನೆಲದಲ್ಲಿ ಪಾಕ್ ಉಗ್ರವಾದ ಹತ್ತಿಕ್ಕುವಲ್ಲಿ ಶ್ರಮಿಸುವ ದಾರಿಯನ್ನೇ ನಾವು ಎದುರು ನೋಡುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ರು.
ಪಾಕ್-ಭಾರತ ಗಡಿ ರೇಖೆಯುದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಾಗೂ ಉದ್ವಿಗ್ನತೆಯನ್ನು ಹೆಚ್ಚಿಸುವ ಕ್ರಮಗಳು ಅಥವಾ ಹೇಳಿಕೆಗಳಿಂದ ದೂರವಿರಲು ಟ್ರಂಪ್ ಎರಡೂ ದೇಶಗಳನ್ನು ಒತ್ತಾಯಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಫ್ಘಾನಿಸ್ತಾನ ಶಾಂತಿ ಪ್ರಕ್ರಿಯೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅಧಿಕಾರಿ, ಇತರೆ ಪ್ರಾದೇಶಿಕ ರಾಷ್ಟ್ರಗಳಂತೆ ಅಮೆರಿಕ ಭಾರತವನ್ನು ಪ್ರೋತ್ಸಾಹಿಸುತ್ತದೆ. ಈ ಶಾಂತಿ ಪ್ರಕ್ರಿಯೆಯನ್ನು ಬೆಂಬಲಿಸಲು ಮಾಡುವ ಯಾವುದೇ ಕಾರ್ಯದಲ್ಲಿ ಯಶಸ್ವಿಯಾಗಬಹುದು ಮತ್ತು 19 ವರ್ಷಗಳ ಮಿಲಿಟರಿ, ರಾಜತಾಂತ್ರಿಕ, ಆರ್ಥಿಕ ಒಪ್ಪಂದಗಳನ್ನು ಕೊನೆಗೊಳಿಸಬಹುದು ಎಂದ್ರು.