ಜಮ್ಮು& ಕಾಶ್ಮೀರ: ಇಲ್ಲಿನ ಪೂಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನವು ಸತತ ಮೂರನೇ ದಿನ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ.
ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ 9.30 ರ ಸುಮಾರಿಗೆ ಪಾಕಿಸ್ತಾನ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘನೆಗೆ ಮಾಡಿದೆ ಎಂದು ಹೇಳಿಕೆ ನೀಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಪಾಕಿಸ್ತಾನವು, ಗಡಿ ನಿಯಂತ್ರಣ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸಿಕೊಳ್ಳಲಿದೆ ಎಂದು ಇದೇ ವೇಳೆ, ತಿಳಿಸಿದ್ದಾರೆ.
ಈ ಪ್ರದೇಶಗಳಲ್ಲಿ ಪ್ರತಿ ಬಾರಿ ಗುಂಡಿನ ಚಕಮಕಿ ನಡೆದಾಗ ಇಲ್ಲಿ ವಾಸಿಸುವ ನೂರಾರು ಜನರ ಜೀವನವು ಛಿದ್ರವಾಗುತ್ತದೆ. ಯುದ್ಧದ ಸಮಯದಲ್ಲಿ ಗಡಿಯಾಚೆಗಿನ ಜನರ ಜೀವನ, ಜಾನುವಾರು ಮತ್ತು ಮನೆಗಳು ಹೆಚ್ಚಿನ ಅಪಾಯವನ್ನು ಎದುರಿಸುವ ಸ್ಥಿತಿ ಉಂಟಾಗುತ್ತದೆ ಎಂದು ಕರ್ನಲ್ ಹೇಳಿದ್ದಾರೆ.