ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾನುವಾರ ಶೆಲ್ ಮತ್ತು ಗುಂಡಿನ ದಾಳಿ ನಡೆಸಿದೆ.
ನಸುಕಿನಜಾವ 3.20ರ ಸುಮಾರಿಗೆ ಪಾಕಿಸ್ತಾನವು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸುವುದರ ಮೂಲಕ ಮತ್ತು ಮಾಂಕೋಟೆ ವಲಯದ ನಿಯಂತ್ರಣ ರೇಖೆಯ ಉದ್ದಕ್ಕೂ ತೀವ್ರವಾದ ಶೆಲ್ ದಾಳಿ ನಡೆಸಿದೆ. ಈ ಮೂಲಕ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಈ ವರ್ಷದ ಆರಂಭದಿಂದಲೂ, 1999 ರಲ್ಲಿ ಉಭಯ ದೇಶಗಳು ಸಹಿ ಹಾಕಿದ ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಇಂತಹ ಕೃತ್ಯಗಳನ್ನು ನಡೆಸುತ್ತ ಬಂದಿದೆ.
2020 ರ ಜನವರಿಯಿಂದ ಇಲ್ಲಿಯವರೆಗೆ 3,190 ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, 24 ನಾಗರೀಕರು ಬಲಿಯಾದ್ರೆ, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.