ಪೂಂಚ್: ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಶಹಪುರ್, ಕಿರ್ನಿ ಮತ್ತು ಕಾಸ್ಬಾ ವಲಯಗಳಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿ ಮತ್ತೆ ಪುಂಡಾಟ ಮೆರೆದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ನೌಶೆರಾ ಸೆಕ್ಟರ್, ಡಿಸ್ಟ್ರಿಕ್ಟ್ ರಾಜೌರಿ ಮತ್ತು ಜಿಲ್ಲಾ ಪೂಂಚ್ (ಜೆಕೆ) ನಲ್ಲಿನ ಶಹಪುರ್, ಕಿರ್ನಿ ಮತ್ತು ಕಸ್ಬಾ ವಲಯಗಳಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ಶೆಲ್ ದಾಳಿ ಮಾಡಿ ಭಾರತ ಸೇನೆಯನ್ನು ಕೆಣಕಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ಪ್ರತಿದಾಳಿ ನಡೆಸಿ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.