ಜಮ್ಮು: ಕಾಶ್ಮೀರದಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕ್ ಸೇನೆಯು ಪೂಂಚ್ ಜಿಲ್ಲೆಯ ನಾಗರಿಕ ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ 10 ವರ್ಷದ ಮಗು ಸೇರಿ ಮೂವರು ಸ್ಥಳೀಯರು ಗಾಯಗೊಂಡಿದ್ದಾರೆ. ಮಗು ಪರಿಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಳಿಗೆ ಒಳಗಾಗಿರುವ ಮಗು ಸ್ಥಿತಿ ಗಂಭೀರವಾಗಿದೆ. ಆಪರೇಷನ್ ಮಾಡಿದ್ದೇವೆ. ಸದ್ಯ ಮಗುವಿನ ಪರಿಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಇರಿಸಲಾಗಿದೆ. ಗಾಯಗೊಂಡಿರುವ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮ್ಮುವಿಗೆ ಕಳುಹಿಸಲಾಗಿದೆ ಎಂದು ಪೂಂಚ್ಜಿಲ್ಲಾಸ್ಪತ್ರೆಯ ಡಾ.ಮನ್ಜೀತ್ ಸಿಂಗ್ ತಿಳಿಸಿದ್ದಾರೆ.
ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಪಾಕಿಸ್ತಾನ ಸೇನೆಯು ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯ ಉದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ನಡೆಸಿತು ಎಂದು ತಿಳಿದುಬಂದಿದೆ.