ಇಸ್ಲಾಮಾಬಾದ್: ಎರಡು ದಿನಗಳ ಪಾಕಿಸ್ತಾನ ಪ್ರವಾಸದಲ್ಲಿರುವ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಇಪ್ಪತ್ತು ಬಿಲಿಯನ್ ಮೌಲ್ಯದ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದು ಆರ್ಥಿಕ ಸಂಕಷ್ಟದಲ್ಲಿರುವ ಪಾಕ್ಗೆ ರಿಲೀಫ್ ನೀಡಲಿದೆ.
ಒಪ್ಪಂದದ ಬಳಿಕ ಮಾತನಾಡಿದ ಸೌದಿ ರಾಜಕುಮಾರ, ಇಂದು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಉಭಯ ದೇಶಗಳ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ ಎಂದರು.
ಪಾಕಿಸ್ತಾನ ಭವಿಷ್ಯದಲ್ಲಿ ಅತ್ಯಂತ ಪ್ರಮುಖವಾದ ದೇಶವಾಗಿ ಬೆಳೆಯಲಿದೆ. ಹೀಗಾಗಿ ಆ ದೇಶದೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.
ಸೌದಿ ರಾಜಕುಮಾರ ಪಾಕ್ ಬಳಿಕ ಭಾರತಕ್ಕೆ ಬರಲಿದ್ದು, ಈ ವೇಳೆ ಪ್ರಧಾನಿ ಮೋದಿ ಹಾಗೂ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ರನ್ನು ಭೇಟಿಯಾಗಲಿದ್ದಾರೆ.