ಮುಂಬೈ(ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯಲ್ಲಿ ಮೂವರನ್ನು ಗುಂಪು ಹತ್ಯೆಗೈದ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ರಾತ್ರಿ ಹೇಳಿದ್ದಾರೆ.
"ಪಾಲ್ಘರ್ ಘಟನೆಯನ್ನು ವಿರೋಧಿಸಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಬಡೆದ ದಿನದಂದು 2 ಸಾಧುಗಳು, ಒಬ್ಬ ಚಾಲಕ ಸೇರಿದಂತೆ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆದಿದೆ. ಸದ್ಯ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘೋರ ಅಪರಾಧ ಮತ್ತು ನಾಚಿಕೆಗೇಡಿನ ಕೃತ್ಯದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸಲಾಗುವುದಿಲ್ಲ" ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
-
पालघर की घटना पर कार्रवाई की गई है। जिन्होंने २ साधुओं, १ ड्राइवर और पुलिस कर्मियों पर हमला किया था, पुलिस ने घटना के दिन ही उन सभी आरोपियों को गिरफ्तार कर लिया है। इस अपराध और शर्मनाक कृत्य के अपराधियों को कठोर दण्ड दिया जाएगा।
— CMO Maharashtra (@CMOMaharashtra) April 19, 2020 " class="align-text-top noRightClick twitterSection" data="
">पालघर की घटना पर कार्रवाई की गई है। जिन्होंने २ साधुओं, १ ड्राइवर और पुलिस कर्मियों पर हमला किया था, पुलिस ने घटना के दिन ही उन सभी आरोपियों को गिरफ्तार कर लिया है। इस अपराध और शर्मनाक कृत्य के अपराधियों को कठोर दण्ड दिया जाएगा।
— CMO Maharashtra (@CMOMaharashtra) April 19, 2020पालघर की घटना पर कार्रवाई की गई है। जिन्होंने २ साधुओं, १ ड्राइवर और पुलिस कर्मियों पर हमला किया था, पुलिस ने घटना के दिन ही उन सभी आरोपियों को गिरफ्तार कर लिया है। इस अपराध और शर्मनाक कृत्य के अपराधियों को कठोर दण्ड दिया जाएगा।
— CMO Maharashtra (@CMOMaharashtra) April 19, 2020
ಇನ್ನೂ, ಘಟನೆ ಕುರಿತು ರಾಜ್ಯ ಗೃಹ ಸಚಿವ ಅನಿಲ್ ದೇಶ್ ಮುಖ್ ಈಗಾಗಲೇ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದಾರೆ.
ಘಟನೆಯ ಹಿನ್ನೆಲೆ:
ಏಪ್ರಿಲ್ 16 ರ ರಾತ್ರಿ ಮುಂಬೈನ ಕಂಡೀವಲಿಯ ಮೂವರು ಪುರುಷರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಸೂರತ್ ಕಡೆಗೆ ತೆರಳುತ್ತಿದ್ದಾಗ ಗುಂಪೊಂದು ಅವರನ್ನು ಕಳ್ಳರೆಂದು ಅನುಮಾನಿಸಿ ಥಳಿಸಿ ಕೊಂದಿತ್ತು.