ಬರ್ಮೇರ್: ಭಾನುವಾರ ರಾಜಸ್ಥಾನದ ಬರ್ಮೇರ್ ಸಂಭವಿಸಿದ್ದ ಶಾಮಿಯಾನ್ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಗಳಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಪರಿಹಾರ ಘೋಷಿಸಿದ್ದಾರೆ.
ಘಟನೆಯಲ್ಲಿ 14 ಮಂದಿ ಸಾವನ್ನಪ್ಪಿದ್ದರೆ, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ ಸಿಎಂ ಅಶೋಕ್ ಗೆಹ್ಲೋಟ್ ಅವರು ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಣವನ್ನು ಘೋಷಿಸಿದ್ದಾರೆ.
ನಿನ್ನೆ ಶಾಲಾ ಆವರಣದಲ್ಲಿ ಆಯೋಜನೆಗೊಂಡಿದ್ದ ರಾಮಕಥಾ ಕಾರ್ಯಕ್ರಮದ ವೇಳೆ ಭಾರಿ ಮಳೆ- ಗಾಳಿಗೆ ಶಾಮಿಯಾನ್ ಕುಸಿದುಬಿದ್ದು ಈ ದುರ್ಘಟನೆ ನಡೆದಿತ್ತು.