ಕೋಲ್ಕತ್ತಾ(ಪಶ್ಚಿಮ ಬಂಗಾಳ): ಇಲ್ಲಿನ ಮೆಟ್ರೋ ರೈಲಿನ ಹವಾನಿಯಂತ್ರಿತ ಬೋಗಿಯಲ್ಲೇ ಹೊಗೆ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಭಯಭೀತರಾಗಿರುವ ಘಟನೆ ನಡೆದಿದೆ.
ಮೂಲಗಳ ಪ್ರಕಾರ, ನೇತಾಜಿ ಭವನ ನಿಲ್ದಾಣದ ಮುಂದಿನ ರವೀಂದ್ರ ಸದನ್ ಕಡೆಗೆ ಹೊರಟಿದ್ದ ಮೆಟ್ರೋ ರೈಲಿನಲ್ಲಿ ಹೊಗೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.
ತಕ್ಷಣವೇ ಪ್ರಯಾಣಿಕರನ್ನು ರೈಲಿನಂದ ಸುರಕ್ಷಿತವಾಗಿ ಇಳಿಸಲಾಗಿದೆ. ಇನ್ನು ಪ್ರಯಾಣಿಕರಿಗೆ ಗಾಯಗಳಾಗಿರುವ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.