ಕಾರವಾರ: ಅನಾರೋಗ್ಯದಿಂದ ಇತ್ತೀಚಿಗೆ ನಿಧನರಾದ ಗೋವಾದ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಚಿತಾಭಸ್ಮವನ್ನು ಕಾರವಾರದ ಕಾಳಿನದಿಯಲ್ಲಿ ವಿಸರ್ಜಿಸಲಾಯಿತು.
ಗೋವಾದಿಂದ ತರಲಾಗಿದ್ದ ಚಿತಾಭಸ್ಮವನ್ನು ಕಾರವಾರದ ಬಿಜೆಪಿ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ವೇಳೆ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಪರಿಕ್ಕರ್ ಚಿತಾಭಸ್ಮಕ್ಕೆ ಪುಷ್ಪ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
ಸಂಜೆಯವರೆಗೂ ಬಿಜೆಪಿ ಕಚೇರಿಯಲ್ಲಿ ನಡೆದ ದರ್ಶನದ ಬಳಿಕ, ಕಾರವಾರ ನಗರದ ಪ್ರಮುಖ ರಸ್ತೆಗಳಲ್ಲಿ ಚಿತಾಭಸ್ಮದ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ಬಳಿಕ ಕಾಳಿ ನದಿ ಸಂಗಮದಲ್ಲಿ ಚಿತಾಭಸ್ಮವನ್ನು ವಿಸರ್ಜನೆ ಮಾಡಲಾಯಿತು.
ಈ ವೇಳೆ ಶಾಸಕಿ ರೂಪಾಲಿ ನಾಯ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ. ನಾಯ್ಕ, ಮನೋಜ್ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.