ಹಂಡೀಗ(ಚಂಡೀಗಢ): ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರು ಹಿರಿಯ ಜಮ್ಮು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಫಾರೂಕ್ ಅಬ್ದುಲ್ಲಾ ಅವರ ಬಿಡುಗಡೆ ಸ್ವಾಗತಾರ್ಹ ಎಂದಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅವರು, ಕೇಂದ್ರ ಸರ್ಕಾರದ ಈ ನಡೆ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಜಾತ್ಯತೀತ ಪ್ರಜಾಪ್ರಭುತ್ವವಾಗಿ ದೇಶದ ಚಿತ್ರಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
"ಇದು ಜಾತ್ಯತೀತ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಗೌರವಿಸುವ ಮೂಲಕ ಶಾಂತಿ, ಕೋಮು ಸೌಹಾರ್ದತೆ ಮತ್ತು ಸಾಮಾಜಿಕ ಸ್ಥಿರತೆಗೆ ಮಾತ್ರವಲ್ಲ, ಭಾರತವನ್ನು ಪ್ರಮುಖ ಜಾಗತಿಕ ಶಕ್ತಿಯನ್ನಾಗಿ ಮಾಡಲು ಆರ್ಥಿಕ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ"ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಎನ್‌ಸಿ ಮುಖ್ಯಸ್ಥರ ಬಂಧನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವು ಆದೇಶ ಹೊರಡಿಸಿದ ನಂತರ ಫಾರೂಕ್ ಅಬ್ದುಲ್ಲಾ ಅವರನ್ನು ಶುಕ್ರವಾರ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಅವರು ಏಳು ತಿಂಗಳಿನಿಂದ ಗೃಹಬಂಧನದಲ್ಲಿದ್ದರು.
ಫಾರೂಕ್ ಅಬ್ದುಲ್ಲಾ ಅವರ ಪುತ್ರ ಓಮರ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಪಕ್ಷಗಳ ನಾಯಕರನ್ನು ಕಳೆದ ಆಗಸ್ಟ್ನಿಂದ ಬಂಧನದಲ್ಲಿಡಲಾಗಿದೆ.