ETV Bharat / bharat

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಸಿದ್ಧತೆಗಳು ಆರಂಭ; ವೆಂಕಯ್ಯ ನಾಯ್ಡು

ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ. ಮಾಧ್ಯಮಗಳು ದ್ವಿಮುಖ ಸಂವಹನವನ್ನು ಸಕ್ರಿಯಗೊಳಿಸುವ ಮೂಲಕ ಸಂಸದೀಯ ಸಂಸ್ಥೆಗಳು ಮತ್ತು ಜನರ ನಡುವಿನ ಸೇತುವೆಯಾಗಿವೆ. ಕೋವಿಡ್​ ಸಮಯದಲ್ಲಿ ಮಾಧ್ಯಮದ ಪಾತ್ರವು ಇನ್ನೂ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು
ರಾಜ್ಯಸಭಾ ಅಧ್ಯಕ್ಷ ಎಂ.ವೆಂಕಯ್ಯ ನಾಯ್ಡು
author img

By

Published : Jul 19, 2020, 7:03 PM IST

ನವದೆಹಲಿ: ಕೊರೊನಾ ಬಿಕ್ಕಟ್ಟಿನ ಕಾರಣದಿಂದ ಅವಧಿಗೆ ಮುನ್ನವೇ ಸಂಸತ್​ ಅಧಿವೇಶನವನ್ನು ಮೊಟಕುಗೊಳಿಸಿದ ಮೂರು ತಿಂಗಳ ನಂತರ, ಸಂಸತ್ತಿನ ವಿವಿಧ ಸ್ಥಾಯಿ ಸಮಿತಿಗಳು ದೇಶದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕುರಿತು ಚರ್ಚಿಸಲು ಮತ್ತೆ ಸಭೆ ಸೇರಲಾರಂಭಿಸಿವೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ ಎಂದು ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಈ ಎಲ್ಲ ಮಾಹಿತಿಗಳನ್ನು ಫೇಸ್​ಬುಕ್​​ ಪೋಸ್ಟ್​ ಒಂದರಲ್ಲಿ ಹಂಚಿಕೊಂಡಿರುವ ಅವರು, ಕೋವಿಡ್​-19 ಸಮಯದಲ್ಲಿ ಮಾಧ್ಯಮಗಳು ನಿಭಾಯಿಸಿದ ಪಾತ್ರವನ್ನು ಶ್ಲಾಘಿಸಿದ್ದು, ಮುಂಗಾರು ಸಂಸತ್ ಅಧಿವೇಶನ ನಡೆಸಲು ಎಲ್ಲ ಸಿದ್ಧತೆಗಳು ನಡೆದಿವೆ ಎಂದಿದ್ದಾರೆ.

ಕೊರೊನಾ ವೈರಸ್​ ಹರಡುವಿಕೆಯನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಪಾಡುವ ನಿಯಮಗಳು ಜಾರಿಯಲ್ಲಿರುವುದರಿಂದ, ಸಂಸತ್ತಿನಲ್ಲಿ ಸಂಸದರು ಕುಳಿತುಕೊಳ್ಳುವ ವ್ಯವಸ್ಥೆಯನ್ನು ಮಾರ್ಪಡಿಸಬೇಕಿದೆ, ಅವರ ಪ್ರಯಾಣದ ವ್ಯವಸ್ಥೆಯನ್ನು ಸುಸೂತ್ರಗೊಳಿಸಬೇಕಿದೆ ಎಂದು ಅವರು ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.