ಚೆನ್ನೈ/ಕೋಲ್ಕತ್ತಾ :ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹೆಚ್ಚಾಗಿರುವ ಹಿನ್ನೆಲೆ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಕೊರೊನಾ ಸೋಂಕು ಹರಡದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಕೆಲವೆಡೆ ಬಸ್ ಸಂಚಾರ ವಿರಳವಾಗಿದೆ. ಕೊರೊನಾ ಹರಡುವ ಭೀತಿಯಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಮುಖವಾಗಿದ್ದು, ಏರ್ಪೋರ್ಟ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಹೆಚ್ಚಾಗಿ ಜನರು ಮನೆಯಲ್ಲೇ ಇರುವಂತೆ ಸೂಚಿಸಲಾಗಿದೆ. ಅಲ್ಲದೇ ಕೆಲವೆಡೆ ರಜೆ ಕೂಡ ನೀಡಲಾಗಿದ್ದು, ಅವಶ್ಯವಿರುವ ಕಡೆ ವರ್ಕ್ ಫ್ರಮ್ ಹೋಮ್ ಸೌಲಭ್ಯ ಒದಗಿಸಲಾಗಿದೆ. ಈ ಹಿನ್ನೆಲೆ ಜನರ ಓಡಾಟ ಇಳಿ ಮುಖವಾಗಿದ್ದು, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಮುಂತಾದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳ ಮೂಲಕ ವಿದೇಶಕ್ಕೆ ಪ್ರಯಾಣಿಸಿರುವ ಸಂಖ್ಯೆ ವಿರಳವಾಗಿದೆ.
ಈಗಾಗಲೇ ವಿಮಾನ ನಿಲ್ದಾಣಗಳು, ರೈಲ್ವೆ ಸ್ಟೇಷನ್ ಸೇರಿದಂತೆ ಎಲ್ಲಡೆ ಸ್ವಚ್ಛತೆ ಕಾಪಾಡಲಾಗ್ತಿದೆ. ಹೊರದೇಶದಿಂದ ಆಗಮಿಸುತ್ತಿರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ವಹಿಸಲಾಗ್ತಿದೆ.