ETV Bharat / bharat

ಉತ್ತರಾಖಂಡ್​ ಸಿಎಂ ಸಾವಿನ ವದಂತಿ: ಹಲವರ ವಿರುದ್ಧ ಪ್ರಕರಣ ದಾಖಲು

"ಮುಖ್ಯಮಂತ್ರಿ ಸಾವಿಗೀಡಾಗಿದ್ದಾರೆ ಎಂಬ ಸಂದೇಶಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು ದುರದೃಷ್ಟಕರ ಹಾಗೂ ಅತ್ಯಂತ ನಾಚಿಕೆಗೇಡಿನ ವಿಷಯ. ತಪ್ಪಿತಸ್ಥರನ್ನು ಗುರುತಿಸಿ ತಕ್ಷಣ ಬಂಧಿಸುವಂತೆ ಡೆಹ್ರಾಡೂನ್​ ಎಸ್​ಎಸ್​ಪಿ ಅವರಿಗೆ ಸೂಚಿಸಲಾಗಿದೆ" ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಜಿ ಅಶೋಕ ಕುಮಾರ ತಿಳಿಸಿದ್ದಾರೆ.

Chief Minister Trivendra Singh Rawat
Chief Minister Trivendra Singh Rawat
author img

By

Published : May 6, 2020, 6:05 PM IST

ಡೆಹ್ರಾಡೂನ್: ಉತ್ತರಾಖಂಡ್​ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್​ ರಾವತ್​ ಮೃತಪಟ್ಟಿದ್ದಾರೆ ಎಂದು ಸೋಷಿಯಲ್​ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹರಡಿದ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

"ಮುಖ್ಯಮಂತ್ರಿ ಸಾವಿಗೀಡಾಗಿದ್ದಾರೆ ಎಂಬ ಸಂದೇಶಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ದುರದೃಷ್ಟಕರ ಹಾಗೂ ಅತ್ಯಂತ ನಾಚಿಕೆಗೇಡಿನ ವಿಷಯ. ತಪ್ಪಿತಸ್ಥರನ್ನು ಗುರುತಿಸಿ ತಕ್ಷಣ ಬಂಧಿಸುವಂತೆ ಡೆಹ್ರಾಡೂನ್​ ಎಸ್​ಎಸ್​ಪಿ ಅವರಿಗೆ ಸೂಚಿಸಲಾಗಿದೆ" ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಜಿ ಅಶೋಕ ಕುಮಾರ ತಿಳಿಸಿದರು.

"ಈಗ ಅವರು ಎಲ್ಲ ಮಿತಿಗಳನ್ನು ದಾಟಿ ವರ್ತಿಸುತ್ತಿದ್ದಾರೆ. ಸುಳ್ಳು ಸುದ್ದಿ ಹರಡಿದವರು ಹಾಗೂ ಈ ಒಳಸಂಚು ರೂಪಿಸಿದವರೆಲ್ಲರನ್ನೂ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಇದೇ ವೇಳೆ, ಅಂತರ್ಜಾಲದ ಕಿಡಿಗೇಡಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.