ಅಹಮದಾಬಾದ್ (ಗುಜರಾತ್): ಇಲ್ಲಿನ ಜನ ಬೇಕಾಬಿಟ್ಟಿಯಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಖರೀದಿಸುತ್ತದ್ದಾರೆ. ಅಷ್ಟು ಮಾತ್ರವಲ್ಲದೇ ಸ್ಟಾಕ್ ಸಂಗ್ರಹಿಸಿ ಇಡುತ್ತಿದ್ದಾರೆ.
ಜನರ ಈ ನಡೆಯಿಂದಾಗಿ ಸರಕಾರ ಕಠಿಣ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದು, ಇದರಿಂದ ಸಂಭವಿಸಬಹುದಾದ ಅಪಾಯವನ್ನು ಗಮನದಲ್ಲಿರಿಸಿಕೊಂಡು ಜನರಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾರಾಟ ಮಾಡದಂತೆ ತಿಳಿಸಿದೆ.
ಭಾರತವು ವಿಶ್ವದ ಅತಿದೊಡ್ಡ ಹೈಡ್ರಾಕ್ಸಿಕ್ಲೋರೋಕ್ವಿನ್ ಉತ್ಪಾದಕವಾಗಿದ್ದು, ಇದನ್ನು ಮಲೇರಿಯಾ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ. ಇದೀಗ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಅಮೆರಿಕಾ ಸೇರಿದಂತೆ ಇತರ ದೇಶಗಳಿಗೂ ರಫ್ತಾಗುತ್ತಿದ್ದು, ಅದರ ಬೇಡಿಕೆ ಈಗ ಹೆಚ್ಚಾಗಿದೆ.
"ಹೈಡ್ರಾಕ್ಸಿಕ್ಲೋರೊಕ್ವಿನ್ ಖರೀದಿಸಲು ಜನರು ಮೆಡಿಕಲ್ಗಳಿಗೆ ಮುಗಿಬೀಳುತ್ತಿದ್ದಾರೆ. ಕೊರೊನಾ ಭೀತಿಯಿಂದ ಜನ ಈ ಔಷಧಿ ತೆಗೆದುಕೊಳ್ಳುತ್ತಿದ್ದಾರೆ. ಆದರೆ ಸಾಮಾನ್ಯ ಜನರು ರೋಗಲಕ್ಷಣವಿಲ್ಲದೇ ಇದನ್ನು ಸೇವಿಸುವುದು ಅಪಾಯ. ಇದು ಅಡ್ಡಪರಿಣಾಮಗಳನ್ನು ಹೊಂದಿದೆ" ಎಂದು ಗುಜರಾತ್ನ ಆಹಾರ ಮತ್ತು ಔಷಧ ನಿಯಂತ್ರಣ ಪ್ರಾಧಿಕಾರದ ಆಯುಕ್ತ ಎಚ್.ಜಿ. ಕೊಶಿಯಾ ಹೇಳಿದ್ದಾರೆ.
ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಯಾರಿಗೂ ಹೈಡ್ರಾಕ್ಸಿಕ್ಲೋರೊಕ್ವಿನ್ ನೀಡಬಾರದು ಎಂದು ಆದೇಶಿಸಲಾಗಿದೆ.