ದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ ಎಂದು ಶಾಹೀನ್ಬಾಗ್ನಲ್ಲಿದ್ದ ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಅದನ್ನ ವಿರೋಧಿಸಿ ಶಾಹೀನ್ಬಾಗ್ನಲ್ಲಿ ಕಳೆದ 3 ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಿಳಾ ಪ್ರತಿಭಟನಾಕಾರರು ಜಮಾಯಿಸಿದ್ದ ಸ್ಥಳದಲ್ಲಿ ಬೆಳಗ್ಗೆ ಸುಮಾರು 9.30ರ ಹೊತ್ತಿಗೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ 5-6 ಪೆಟ್ರೋಲ್ ಬಾಂಬ್ಗಳು ದೊರಕಿವೆ. ಅದೃಷ್ಟವಶಾತ್ ಯಾವುದೇ ಸಾವು-ನೋವಾಗಿಲ್ಲ ಎಂದು ತಿಳಿದು ಬಂದಿದೆ.