ನವದೆಹಲಿ: ಒಂದು ದಿನದ ವಿರಾಮದ ನಂತರ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಡೀಸೆಲ್ ಜುಲೈ 30ರಿಂದಲೂ ತನ್ನ ಬೆಲೆಯನ್ನು ಸ್ಥಿರವಾಗಿ ಉಳಿಸಿಕೊಂಡಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 46 ಡಾಲರ್ನಷ್ಟಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ದೆಹಲಿಯಲ್ಲಿ ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 10 ಪೈಸೆ ಹೆಚ್ಚಿಸಿದ್ದು, ಮುಂಬೈ, ಕೋಲ್ಕತಾ ಮತ್ತು ಚೆನ್ನೈನಲ್ಲಿ ಗುರುವಾರ ಲೀಟರ್‌ಗೆ ಒಂಬತ್ತು ಪೈಸೆ ಹೆಚ್ಚಾಗಿದೆ.
ಇಂಡಿಯನ್ ಆಯಿಲ್ ವೆಬ್‌ಸೈಟ್ ಪ್ರಕಾರ, ದೆಹಲಿ, ಕೋಲ್ಕತಾ, ಮುಂಬೈ ಮತ್ತು ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಕ್ರಮವಾಗಿ ಲೀಟರ್‌ಗೆ 81.83, 83.33, 88.48, 84.82 ರೂ.ಗಳಿಗೆ ಏರಿಕೆಯಾಗಿದೆ.
ಕಳೆದ 12 ದಿನಗಳ ಪೈಕಿ 10 ದಿನಗಳಲ್ಲೊ ಪೆಟ್ರೋಲ್ ಬೆಲೆ ಏರಿಕೆಯಾಗಿದೆ. ಈ ಅವಧಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪ್ರತಿ ಲೀಟರ್‌ಗೆ 1.40 ರೂಪಾಯಿ ಏರಿಕೆಯಾಗಿದೆ.