ETV Bharat / bharat

ಭಾರತದಲ್ಲಿ ಕೋವಿಡ್ ಲಸಿಕೆ ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಫೈಜರ್..! - ತುರ್ತು ಬಳಕೆಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಫೈಜರ್

ದೇಶದಲ್ಲಿ ಕೋವಿಡ್-19 ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕೆ ಸಲ್ಲಿಸಲಾಗಿರುವ ಅರ್ಜಿಯನ್ನು ಹಿಂತೆಗೆದುಕೊಳ್ಳಲು ಫೈಜರ್ ನಿರ್ಧರಿಸಿದೆ.

India
India
author img

By

Published : Feb 5, 2021, 1:07 PM IST

ನವದೆಹಲಿ: ಭಾರತದಲ್ಲಿ ಕೋವಿಡ್-19 ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕೆ ಸಲ್ಲಿಸಲಾಗಿರುವ ಅರ್ಜಿಯನ್ನು ಹಿಂತೆಗೆದುಕೊಳ್ಳಲು ಫೈಜರ್ ಕಂಪನಿ ನಿರ್ಧರಿಸಿದೆ.

ಕೋವಿಡ್-19 ವಿರುದ್ಧ ಭಾರತದಲ್ಲಿ ತುರ್ತು ಬಳಕೆಗೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ(ಡಿಸಿಜಿಐ)ಗೆ ಕೋರಿದ್ದ ಮೊದಲ ಔಷಧೀಯ ಕಂಪನಿ ಇದಾಗಿತ್ತು. ಅದಕ್ಕೆ ಇಂಗ್ಲೆಂಡ್ ಮತ್ತು ಬಹರೇನ್​​​ ​ನಲ್ಲಿ ತುರ್ತು ಬಳಕೆಗೆ ಅನುಮತಿ ಸಿಕ್ಕಿದೆ.

ತನ್ನ ಕೋವಿಡ್-19 ಲಸಿಕೆಯ ತುರ್ತು ಬಳಕೆಯ ದೃಢೀಕರಣದ ಅನುಸಾರವಾಗಿ, ಫೈಜರ್ ಫೆಬ್ರವರಿ 3 ರಂದು ಭಾರತದ ಔಷಧ ನಿಯಂತ್ರಣ ಪ್ರಾಧಿಕಾರದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ಭಾಗವಹಿಸಿತ್ತು. ಸಭೆಯಲ್ಲಿನ ಚರ್ಚೆಗಳು ಮತ್ತು ನಿಯಂತ್ರಕರಿಗೆ ಅಗತ್ಯವಿರುವ ಹೆಚ್ಚುವರಿ ಮಾಹಿತಿಯ ತಿಳಿವಳಿಕೆಯ ಆಧಾರದ ಮೇಲೆ, ಕಂಪನಿಯು ಈ ಸಮಯದಲ್ಲಿ ತನ್ನ ಅರ್ಜಿಯನ್ನು ಹಿಂಪಡೆಯಲು ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಫೈಜರ್ ಪ್ರಾಧಿಕಾರದೊಂದಿಗೆ ಸಹಯೋಗವನ್ನು ಮುಂದುವರಿಸುತ್ತದೆ ಮತ್ತು ಮುಂದಿನ ದಿನಗಳಲ್ಲಿ ಹೆಚ್ಚುವರಿ ಮಾಹಿತಿಯೊಂದಿಗೆ ಅರ್ಜಿ ಸಲ್ಲಿಸುತ್ತದೆ ಎಂದು ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.