ನವದೆಹಲಿ : ಆರೋಗ್ಯ ಕ್ಷೇತ್ರ ಮತ್ತು ಸಂಬಂಧಿತ ಸೇವೆಗಳನ್ನು ರಾಷ್ಟ್ರೀಕರಣಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಅನ್ನು ಸುಪ್ರೀಂಕೋರ್ಟ್‌ನಲ್ಲಿ ದಾಖಲಿಸಲಾಗಿದೆ.
ವಕೀಲ ಅಮಿತ್ ದ್ವಿವೇದಿ ಅವರು ಸಲ್ಲಿಸಿದ ಅರ್ಜಿಯಲ್ಲಿ, ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಆರೋಗ್ಯ ಸೌಲಭ್ಯಗಳ ಮೇಲೆ ಹೆಚ್ಚಿನ ಅವಲಂಬನೆ ಬೇಕಾಗುತ್ತದೆ. ಈ ಅಗತ್ಯವನ್ನು ನಿರ್ವಹಿಸಲು ಸಾರ್ವಜನಿಕ ಆರೋಗ್ಯ ಕ್ಷೇತ್ರವು ಸಾಕಷ್ಟು ಸಜ್ಜುಗೊಂಡಿಲ್ಲ. ಆದ್ದರಿಂದ ಸಾಂಕ್ರಾಮಿಕ ರೋಗವನ್ನು ಸೋಲಿಸಲು ಖಾಸಗಿ ವಲಯವನ್ನು ಸಹ ಗಣನೆಗೆ ತೆಗೆದುಕೊಳ್ಳಬೇಕು. ಎಲ್ಲ ಆರೋಗ್ಯ ಸೌಲಭ್ಯಗಳು, ಎಲ್ಲ 36 ಸಂಸ್ಥೆಗಳು, ಎಲ್ಲಾ ಕಂಪನಿಗಳು ಮತ್ತು ಆರೋಗ್ಯ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲಾ ಘಟಕಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.