ನವದೆಹಲಿ: ಮನಿ ಲಾಂಡರಿಂಗ್ ಮತ್ತು ತೆರಿಗೆ ವಂಚನೆಯಂತಹ ವಿವಿಧ ಆರ್ಥಿಕ ಪ್ರಕರಣಗಳನ್ನು ಒಂದು ವರ್ಷದೊಳಗೆ ಇತ್ಯರ್ಥ ಪಡಿಸಲು, ಪ್ರತಿ ಜಿಲ್ಲೆಯಲ್ಲೂ ವಿಶೇಷ ಭ್ರಷ್ಟಾಚಾರ ವಿರೋಧಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕೆಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.
ಬಿಜೆಪಿ ಮುಖಂಡ ಮತ್ತು ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಪಿಐಎಲ್ ಸಲ್ಲಿಸಿದ್ದಾರೆ. ಆರ್ಥಿಕ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹೈಕೋರ್ಟ್‌ಗೆ ನಿರ್ದೇಶಿಸಬೇಕೆಂದು ಕೋರಿದ್ದಾರೆ.
ಓದಿ:ಭಾರತದಲ್ಲಿ ಬೌದ್ಧ ಸಾಹಿತ್ಯ ಮತ್ತು ಗ್ರಂಥಗಳ ಲೈಬ್ರರಿ ನಿರ್ಮಾಣವಾಗಲಿದೆ: ಪ್ರಧಾನಿ ಮೋದಿ
ಈ ಅರ್ಜಿಯಲ್ಲಿ ಗೃಹ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ ಹಾಗೂ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪಾರ್ಟಿಗಳಾಗಿ ಮಾಡಲಾಗಿದೆ.
ಭಾರತದ ಭ್ರಷ್ಟಾಚಾರ ವಿರೋಧಿ ಕಾನೂನುಗಳು ತುಂಬಾ ದುರ್ಬಲ ಮತ್ತು ನಿಷ್ಪರಿಣಾಮಕಾರಿಯಾಗಿವೆ. ಭ್ರಷ್ಟಾಚಾರವನ್ನು ನಿಯಂತ್ರಿಸುವಲ್ಲಿ ವಿಫಲವಾಗಿವೆ ಎಂದಿದ್ದಾರೆ.