ನವದೆಹಲಿ: ರಾಜಸ್ಥಾನದಲ್ಲಿ ಉಲ್ಬಣಗೊಳ್ಳುತ್ತಿರುವ ರಾಜಕೀಯ ಬಿಕ್ಕಟ್ಟು ಮತ್ತು ಉಹಾಪೋಹಗಳ ಮಧ್ಯೆ, ರಾಜಸ್ಥಾನದ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಬಿಜೆಪಿ ಸೇರುವುದಿಲ್ಲ ಎಂದು ತಿಳಿದು ಬಂದಿದೆ.
ದೆಹಲಿಯಲ್ಲಿದ್ದಾಗ, ಪೈಲಟ್ ಮಾಜಿ ಸಹೋದ್ಯೋಗಿ, ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎಂದು ವರದಿಯಾಗಿದೆ ಎಂದು ಸಿಂಧಿಯಾ ಹತ್ತಿರದ ಮೂಲಗಳು ತಿಳಿಸಿವೆ.
ಪೈಲಟ್ ಮತ್ತು ಅವರ ಬೆಂಬಲಿಗರನ್ನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವಮಾನಿಸಿದ್ದಾರೆ ಎಂದು ವರದಿಯಾಗಿದೆ. ಇಷ್ಟೆಲ್ಲ ಬೆಳವಣಿಗೆಯಾದರೂ ಸಚಿನ್ ಪೈಲಟ್ ಬಿಜೆಪಿ ಸೇರುವುದಿಲ್ಲ ಎಂದು ತಿಳಿದು ಬಂದಿದೆ.
ಪೈಲಟ್ ಮತ್ತು ಸಿಂಧಿಯಾ ಇಬ್ಬರು ಯಾವ ವಿಷಯದ ಕುರಿತು ಮಾತನಾಡಿದ್ದಾರೆ ಎಂಬುದು ಖಚಿತಪಟ್ಟಿಲ್ಲ. ಇಬ್ಬರೂ ಹಲವಾರು ವರ್ಷಗಳಿಂದ ಒಟ್ಟಿಗೆ ಕೆಲಸ ಮಾಡಿದ್ದಾರೆ. ಸಿಂಧಿಯಾ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದರೂ, ಪೈಲಟ್ ಮತ್ತು ಸಿಂಧಿಯಾ ಇಬ್ಬರೂ ನಿಯಮಿತವಾಗಿ ದೂರವಾಣಿ ಸಂಪರ್ಕ ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.