ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಹಾಗೂ ಡೆಂಘೀ ಜ್ವರದಿಂದ ಬಳಲುತ್ತಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಇದೀಗ ಪ್ಲಾಸ್ಮಾ ಥೆರೆಪಿಗೆ ಒಳಗಾಗಿದ್ದಾರೆ. ಕಳೆದೆರಡು ದಿನಗಳ ಹಿಂದೆ ಕೋವಿಡ್ನಿಂದಾಗಿ ಅವರನ್ನ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ದೆಹಲಿ ಡಿಸಿಎಂ ಮನೀಷ್ ಸಿಸೋಡಿಯಾಗೆ ಕೊರೊನಾ ಜತೆ ಡೆಂಘೀ ಜ್ವರ
ತದನಂತರ ಡೆಂಘೀ ಜ್ವರ ಕಾಣಿಸಿಕೊಂಡಿದ್ದರಿಂದ ಸಾಂಕೇತ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಪ್ಲಾಸ್ಮಾ ಥೆರೆಪಿಗೊಳಗಾಗಿದ್ದಾರೆ. 48 ವರ್ಷದ ಸಿಸೋಡಿಯಾ ಅವರಲ್ಲಿ ಸೆಪ್ಟೆಂಬರ್ 14ರಂದು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ವೇಳೆ ಅವರು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದರು.
ಆದರೆ ಕಳೆದೆರಡು ದಿನಗಳ ಹಿಂದೆ ಉಸಿರಾಟದ ತೊಂದರೆ ಹಾಗೂ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನ ಲೋಕ ನಾಯಕ ಜಯಪ್ರಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.