ETV Bharat / bharat

ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ: ಪ್ರಧಾನಿ ಮೋದಿ, ಅಮಿತ್ ಶಾ ಮೆಚ್ಚುಗೆ

ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅಭಿನಂದಿಸಿದ್ದಾರೆ.

PM Modi, Amit Shah lauds successful BrahMos launch
ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ
author img

By

Published : Oct 1, 2020, 6:37 AM IST

ನವದೆಹಲಿ: ಒಡಿಶಾ ಕರಾವಳಿಯ ಪರೀಕ್ಷಾ ಸೌಲಭ್ಯದಿಂದ ಸ್ಥಳೀಯ ಬೂಸ್ಟರ್‌ನೊಂದಿಗೆ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ಯಶಸ್ವಿಯಾಗಿ ಪರೀಕ್ಷಿಸಿದ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿ ಯಶಸ್ವಿ ಪರೀಕ್ಷಾ ಉಡಾವಣೆಯೊಂದಿಗೆ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಇದು ಕಾರ್ಯಾಚರಣಾ ಸಾಮರ್ಥ್ಯಗಳು ಮತ್ತು ಹೆಚ್ಚುವರಿ ಸ್ಥಳೀಯ ತಂತ್ರಜ್ಞಾನಗಳನ್ನು ಪ್ರದರ್ಶಿಸುತ್ತದೆ. ಎಲ್ಲಾ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

  • Brahmos Supersonic Cruise Missile has achieved yet another milestone with successful test launch showcasing enhanced operational capabilities and additional indigenous technologies. Congratulations to all the scientists and engineers. @DRDO_India @BrahMosMissile

    — Narendra Modi (@narendramodi) September 30, 2020 " class="align-text-top noRightClick twitterSection" data=" ">

ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿಯ ಯಶಸ್ವಿ ಪರೀಕ್ಷೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯನ್ನು ಅಭಿನಂದಿಸಿದ್ದು, ಅತ್ಯುನ್ನತ ಶಸ್ತ್ರಾಸ್ತ್ರದ ಸ್ಥಿತಿ ಆತ್ಮನಿರ್ಭರ್ ಭಾರತ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ದೇಶೀಯವಾಗಿ ಅಭಿವೃದ್ಧಿ ಹೊಂದಿದ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದಕ್ಕಾಗಿ ಭಾರತವು ಡಿಆರ್​ಡಿಒ ಇಂಡಿಯಾ ಬಗ್ಗೆ ಹೆಮ್ಮೆಪಡುತ್ತದೆ. ಈ ಅತ್ಯಾಧುನಿಕ ಶಸ್ತ್ರಾಸ್ತ್ರವು ಭಾರತದ ರಕ್ಷಣಾ ಸಾಮರ್ಥ್ಯ ಮತ್ತು ಪ್ರಧಾನಿ ಮೋದಿ ಅವರ ಆತ್ಮನಿರ್ಭರ್ ಭಾರತದ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.

  • India is extremely proud of @DRDO_India for successfully testing the indigenously developed extended range BrahMos supersonic cruise missile. This state of the art weapon is a testimony of India’s defence potential and PM @NarendraModi ji’s resolve towards an #AatmaNirbharBharat.

    — Amit Shah (@AmitShah) September 30, 2020 " class="align-text-top noRightClick twitterSection" data=" ">

400 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಗುರಿಗಳನ್ನು ಮುಟ್ಟಬಲ್ಲ ವಿಸ್ತೃತ ಶ್ರೇಣಿಯ ಬ್ರಹ್ಮೋಸ್ ಸೂಪರ್​ ಸಾನಿಕ್ ಕ್ರೂಸ್ ಕ್ಷಿಪಣಿಯನ್ನು ಚಂಡಿಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್​ನಿಂದ ಪರೀಕ್ಷಿಸಲಾಗಿದ್ದು, ಎಲ್ಲಾ ನಿಯತಾಂಕಗಳನ್ನು ಪೂರೈಸುವಲ್ಲಿ ಪ್ರಯೋಗ ಯಶಸ್ವಿಯಾಗಿದೆ ಎಂದು ಡಿಆರ್​ಡಿಒ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.