ನವದೆಹಲಿ: ಹೊಸ ಸ್ವರೂಪದೊಂದಿಗೆ 4ನೇ ಹಂತದ ಲಾಕ್ಡೌನ್ ಇರಲಿದೆ. ಮೇ 18ರೊಳಗೆ ಇದರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದರ ಜೊತೆಗೆ ಲಾಕ್ಡೌನ್ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್ ಅನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇದು ದೇಶದ ಜಿಡಿಪಿ ಶೇಕಡಾ 10ರಷ್ಟಿದೆ. ಆತ್ಮ ನಿರ್ಭರ ಭಾರತ ಅಭಿಯಾನದಡಿ ಪ್ಯಾಕೇಜ್ ಘೋಷಿಸಲಾಗಿದೆ. ಇದು ದೇಶದ ಅತಿ ದೊಡ್ಡ ಪರಿಹಾರ ಪ್ಯಾಕೇಜ್ ಆಗಿದೆ.
ಈ ಪ್ಯಾಕೇಜ್ನಲ್ಲಿ ರೈತರು, ಕಾರ್ಮಿಕರು, ಸಣ್ಣ ಹಾಗೂ ಮಧ್ಯಮ ವರ್ಗದ ಕೈಗಾರಿಗಳಿಗೆ ನೆರವು ನೀಡಲಾಗುತ್ತದೆ. ನಾಳೆ ಈ ಪ್ಯಾಕೇಜ್ ಬಗ್ಗೆ ಕೇಂದ್ರ ಹಣಕಾಸು ಸಚಿವರು ವಿವರಣೆ ನೀಡಲಿದ್ದಾರೆ ಎಂದು ಮೋದಿ ಸ್ಪಷ್ಟಪಡಿಸಿದ್ದಾರೆ.
ಇನ್ನು ಈ ಪ್ಯಾಕೇಜ್ ಮಧ್ಯಮವರ್ಗದವರಿಗೆ, ಕಾರ್ಮಿಕರಿಗೆ ಹಾಗೂ ಉದ್ಯೋಗದಾತರಿಗೆ ನೆರವು ನೀಡಲಿದ್ದು, ದೇಶಿಯ ವಸ್ತುಗಳ ತಯಾರಿಕೆಗೆ ಹಾಗೂ ಪೂರೈಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಇದರಿಂದಾಗಿ ದೇಶಿಯ ವಸ್ತುಗಳನ್ನು ಖರೀದಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.