ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ಬಿಹಾರ ಸರ್ಕಾರದಲ್ಲಿ ಸಚಿವರುಗಳಾಗಿ ಪ್ರಮಾಣವಚನ ಸ್ವೀಕರಿಸಿದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಎನ್ಡಿಎ ಕುಟುಂಬ ಬಿಹಾರದ ಪ್ರಗತಿಗಾಗಿ ಒಗ್ಗೂಡಿ ಶ್ರಮಿಸಲಿದೆ. ನಾನು ಬಿಹಾರದ ಕಲ್ಯಾಣಕ್ಕೆ ಕೇಂದ್ರದಿಂದ ಸಾಧ್ಯವಾಗುವ ಎಲ್ಲಾ ನೆರವು ನೀಡುತ್ತೇನೆ ಎಂದು ಟ್ವಿಟರ್ನಲ್ಲಿ ಪ್ರಧಾನಿ ಮೋದಿ ಅಭಯ ನೀಡಿದ್ದಾರೆ.
ಏಳನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರಿಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಬಿಹಾರ ಅಭಿವೃದ್ಧಿಯ ಹೊಸ ಆಯಾಮಗಳನ್ನು ಸಾಧಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಆಶಿಸಿದ್ದಾರೆ.