ETV Bharat / bharat

ಎಲ್ಲ ರಾಜ್ಯದ ಸಿಎಂಗಳೊಂದಿಗೆ ನಮೋ ಸಂವಾದ... ಮಹತ್ವದ ಮಾಹಿತಿ ಪಡೆದುಕೊಂಡ ನಮೋ!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಎಲ್ಲ ರಾಜ್ಯದ ಸಿಎಂಗಳೊಂದಿಗೆ ವಿಡಿಯೋ ಕಾನ್ಪರೆನ್ಸ್​ ನಡೆಸಿದರು.

PM Modi holds video conference with CMs on coronavirus

author img

By

Published : Apr 2, 2020, 1:20 PM IST

Updated : Apr 2, 2020, 7:07 PM IST

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್​ ರೌದ್ರನರ್ತನ ಜೋರಾಗಿದ್ದು, ಇದರ ಮಧ್ಯೆ ಎಲ್ಲ ರಾಜ್ಯದ ಸಿಎಂಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ವಿಡಿಯೋ ಕಾನ್ಪರೆನ್ಸ್​ ನಡೆಸಿ ಮಹತ್ವದ ಮಾಹಿತಿ ಪಡೆದುಕೊಂಡರು.

ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಕೇರಳ, ನವದೆಹಲಿ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳು ಸೇರಿದಂತೆ ಎಲ್ಲರೂ ವಿಡಿಯೋ ಸಂವಾದದಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಕೊರೊನಾ ವೈರಸ್​ ಪರಿಸ್ಥಿತಿ ಹಾಗೂ ಸೋಂಕು ಹರಡುವುದನ್ನ ತಡೆಗಟ್ಟಲು ವಿವಿಧ ರಾಜ್ಯಗಳು ಕೈಗೊಂಡಿದ್ದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದ ನಮೋ ಇದು ಅದು ಎಷ್ಟರ ಮಟ್ಟಿಗೆ ಸಫಲವಾಗಿದೆ ಎಂಬುದರ ಮಾಹಿತಿ ಪಡೆದುಕೊಂಡರು. ವಿಡಿಯೋ ಸಂವಾದದ ವೇಳೆ ಗೃಹ ಸಚಿವ ಅಮಿತ್​ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ಉಪಸ್ಥಿತರಿದ್ದರು.

ಎಲ್ಲ ರಾಜ್ಯದ ಸಿಎಂಗಳೊಂದಿಗೆ ನಮೋ ಸಂವಾದ

ಕರ್ನಾಟಕ,ಮಹಾರಾಷ್ಟ್ರ,ಕೇರಳ,ಉತ್ತರಪ್ರದೇಶ, ತೆಲಂಗಾಣದಲ್ಲಿ ಹೆಚ್ಚಿನ ಪ್ರಕರಣ ಕಂಡು ಬಂದಿರುವ ಕಾರಣ ಹೆಚ್ಚು ನಿಗಾ ವಹಿಸುವಂತೆ ಸಿಎಂಗಳಿಗೆ ನಮೋ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಜತೆ ದೂರವಾಣಿ ಮೂಲಕ ಮಾತನಾಡಿ ರಾಜ್ಯದಲ್ಲಿನ ಮಾಹಿತಿ ಪಡೆದುಕೊಂಡಿದ್ದ ನಮೋ ಇಂದು ಅವರೊಂದಿಗೆ ವಿಡಿಯೋ ಕಾನ್ಪರೆನ್ಸ್​ ನಡೆಸಿದರು.

Last Updated : Apr 2, 2020, 7:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.