ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ 93ನೇ ವಸಂತಕ್ಕೆ ಕಾಲಿರಿಸಿರೋ ಹಿನ್ನೆಲೆಯಲ್ಲಿ ಈ ಸಂಭ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಂಡಿದ್ದಾರೆ. ಅಡ್ವಾಣಿ ಅವರ ನಿವಾಸಕ್ಕೆ ತೆರಳಿದ ಮೋದಿ ಪಕ್ಷದ ಹಿರಿಯ ಮುಖಂಡನ ಜನ್ಮದಿನವನ್ನು ಆಚರಿಸಿದ್ದಾರೆ.
ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಕೂಡ ಉಪಸ್ಥಿತರಿದ್ದರು. ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಇದಕ್ಕೂ ಮೊದಲು ಟ್ವೀಟ್ ಮಾಡಿ ಅಡ್ವಾಣಿಗೆ ಶುಭಕೋರಿದ್ದ ಮೋದಿ, ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶವಾಸಿಗಳಿಗೆ ಅಡ್ವಾಣಿ ಅವರು 'ಜೀವಂತ ಸ್ಫೂರ್ತಿ' ಎಂದು ಹೇಳಿದ್ದರು.
-
भाजपा को जन-जन तक पहुंचाने के साथ देश के विकास में अहम भूमिका निभाने वाले श्रद्धेय श्री लालकृष्ण आडवाणी जी को जन्मदिन की बहुत-बहुत बधाई। वे पार्टी के करोड़ों कार्यकर्ताओं के साथ ही देशवासियों के प्रत्यक्ष प्रेरणास्रोत हैं। मैं उनकी लंबी आयु और स्वस्थ जीवन की प्रार्थना करता हूं।
— Narendra Modi (@narendramodi) November 8, 2020 " class="align-text-top noRightClick twitterSection" data="
">भाजपा को जन-जन तक पहुंचाने के साथ देश के विकास में अहम भूमिका निभाने वाले श्रद्धेय श्री लालकृष्ण आडवाणी जी को जन्मदिन की बहुत-बहुत बधाई। वे पार्टी के करोड़ों कार्यकर्ताओं के साथ ही देशवासियों के प्रत्यक्ष प्रेरणास्रोत हैं। मैं उनकी लंबी आयु और स्वस्थ जीवन की प्रार्थना करता हूं।
— Narendra Modi (@narendramodi) November 8, 2020भाजपा को जन-जन तक पहुंचाने के साथ देश के विकास में अहम भूमिका निभाने वाले श्रद्धेय श्री लालकृष्ण आडवाणी जी को जन्मदिन की बहुत-बहुत बधाई। वे पार्टी के करोड़ों कार्यकर्ताओं के साथ ही देशवासियों के प्रत्यक्ष प्रेरणास्रोत हैं। मैं उनकी लंबी आयु और स्वस्थ जीवन की प्रार्थना करता हूं।
— Narendra Modi (@narendramodi) November 8, 2020
"ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಗೃಹ ಸಚಿವ ಮತ್ತು ಉಪ ಪ್ರಧಾನ ಮಂತ್ರಿಯಾಗಿದ್ದ ಅಡ್ವಾಣಿ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಬಿಜೆಪಿ ಪಕ್ಷವನ್ನು ಜನಸಾಮಾನ್ಯರವರೆಗೆ ಕೊಂಡೊಯ್ದಿದ್ದಾರೆ.
ಕೋಟ್ಯಂತರ ಬಿಜೆಪಿ ಕಾರ್ಯಕರ್ತರಿಗೆ ಮತ್ತು ದೇಶದ ಜನರಿಗೆ ಅವರು ಜೀವಂತ ಸ್ಫೂರ್ತಿ. ಅವರು ದೀರ್ಘಕಾಲ ಆರೋಗ್ಯಕರ ಜೀವನ ನಡೆಸಲಿ ಎಂದು ಹಾರೈಸುತ್ತೇನೆ" ಎಂದು ಹಿಂದಿಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದರು.