ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಅರ್ಪಿಸುವ ನಿರೀಕ್ಷೆಯಿದೆ. ಹೊಸ ಕೃಷಿ ಕಾನೂನುಗಳ ಬಗ್ಗೆ ಪ್ರತ್ಯೇಕ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿರುವುದರಿಂದ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕೋಲಾಹ ಉಂಟಾಗಿದೆ.
ಫೆಬ್ರವರಿ 10 ರಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಧನ್ಯವಾದ ತಿಳಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಹಾಗೆಯೇ ಮುಂದಿನ ಎರಡು ದಿನಗಳವರೆಗೆ ಸದನದ ಪ್ರಶ್ನಾವಳಿ ಅವಧಿ ವಿಸ್ತರಿಸುವ ವಿತರಿಸುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿರ್ಣಯವನ್ನು ಲೋಕಸಭೆ ಅಂಗೀಕರಿಸಿದೆ.
ಹೊಸ ಕೃಷಿ ಕಾನೂನುಗಳ ಬಗ್ಗೆ ಪ್ರತ್ಯೇಕ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಪಟ್ಟು ಹಿಡಿದ ಹಿನ್ನೆಲೆ ಲೋಕಸಭೆ ಕಲಾಪವನ್ನು ಫೆಬ್ರವರಿ 9 ರಂದು ಸಂಜೆ 4 ರವರೆಗೆ ಮುಂದೂಡಲಾಯಿತು. ವಿಪಕ್ಷಗಳು ರೈತರ ಚಳವಳಿ ಬಗ್ಗೆ ಚರ್ಚಿಸಲು ಕಾಲಾವಕಾಶ ಕೇಳಿರುವುದು ಸದನದಲ್ಲಿ ಕೋಲಾಹಲ ಎಬ್ಬಿಸಿದೆ.
ಹೀಗಾಗಿ ಹೊಸ ಕೃಷಿ ಕಾನೂನುಗಳ ಬಗ್ಗೆ ಪ್ರತ್ಯೇಕ ಚರ್ಚೆ ನಡೆಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಕಳೆದ ವಾರ ನಾಲ್ಕು ದಿನಗಳಿಂದ ಉಂಟಾದ ಅಡೆತಡೆಗಳ ಬಗ್ಗೆ ಚರ್ಚಿಸಿ ಇದೀಗ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ನಾಳೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಲಿದ್ದಾರೆ.