ನವದೆಹಲಿ: ಅರವಿಂದ್ ಕೇಜ್ರಿವಾಲ್ ಅವರು ಫೆ.16ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಆದರೆ, ಮೋದಿ ಅಂದು ದೆಹಲಿಯಲ್ಲಿ ಇರುವುದಿಲ್ಲ. ಮೋದಿ ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
ನೂತನವಾಗಿ ನಿರ್ಮಿಸಿದ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ವೈದಿಕ ವಿಜ್ಞಾನ ಕೇಂದ್ರ ಸೇರಿದಂತೆ ಹಲವಾರು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.