ETV Bharat / bharat

ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ ಪಿಎಂ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸಾಧು-ಸಂತರು

author img

By

Published : Aug 5, 2020, 1:12 PM IST

Updated : Aug 5, 2020, 1:33 PM IST

ಪುಣ್ಯ ಭೂಮಿ ಅಯೋಧ್ಯೆಯಲ್ಲಿ ಇತಿಹಾಸ ರಚನೆಯಾಗಿದೆ. ಭಾರತೀಯರ ದಶಕಗಳ ಕನಸು ನನಸಾಗಿದೆ. ಹಲವಾರು ವರ್ಷಗಳ ಕಾಲ ನ್ಯಾಯಾಲಯದಲ್ಲಿ ವಿಚಾರಣೆ ನಡೆದ ಬಳಿಕ ಇವತ್ತು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆಯ ಯೋಗ ಕೂಡಿ ಬಂತು. ಪ್ರಧಾನಿ ನರೇಂದ್ರ ಮೋದಿ ಅಭಿಜಿನ್​ ಮುಹೂರ್ತದಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಅಯೋಧ್ಯೆ ತಲುಪಿದ ಕೂಡಲೇ ಪ್ರಧಾನಿ ಮೋದಿ, ಹನುಮಾನ್​​​ಗಡಿಯಲ್ಲಿ ಪೂಜೆ ನೆರವೇರಿಸಿದರು. ನಂತರ ರಾಮ್​ಲಲ್ಲಾ ದರ್ಶನ ಪಡೆದರು.

bhoomi pujan
ರಾಮಮಂದಿರಕ್ಕೆ ಶಿಲಾನ್ಯಾಸ

ಅಯೋಧ್ಯಾ (ಉತ್ತರ ಪ್ರದೇಶ): ದಶಕಗಳ ಕನಸಾದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದ್ದು, ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ್ದು, ಈ ಕಾರ್ಯಕ್ರಮದಲ್ಲಿ ಮೋದಿ ಜತೆಗೆ ವಿವಿಧ ಕ್ಷೇತ್ರಗಳ 175 ಮಂದಿ ಗಣ್ಯರು ಭಾಗವಹಿಸಿದ್ದರು.

ಶಿಲಾನ್ಯಾಸಕ್ಕೆ 5 ಇಟ್ಟಿಗೆಗಳನ್ನು ಬಳಕೆ ಮಾಡಲಾಗಿದ್ದು, ಗರ್ಭಗುಡಿ ಸ್ಥಾನದಲ್ಲಿ ಶಿಲಾನ್ಯಾಸಕ್ಕೆ ಇಟ್ಟಿಗೆ ಇಡಲಾಗಿದೆ. ಅಮೃತ ಯೋಗ, ಸಿದ್ಧಯೋಗ, ಭದ್ರ ತಿಥಿ, ಭೂಮಿ ಕರಣ, ಶತಭಿಷ ನಕ್ಷತ್ರದಲ್ಲಿ ಶಿಲಾನ್ಯಾಸ ನೆರವೇರಿಸಲಾಗಿದೆ.

175 ಅತಿಥಿಗಳ ಪೈಕಿ 135 ಮಂದಿ ಸಂತರು ಇದರಲ್ಲಿ ಪಾಲ್ಗೊಂಡಿದ್ದು, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್​, ಮುಂತಾದವರೆಲ್ಲರಿಗೂ ಆಸನದ ವ್ಯವಸ್ಥೆ ಮಾಡಲಾಗಿತ್ತು.

ಶಂಕು ಸ್ಥಾಪನೆ ಕಾರ್ಯಕ್ರಮವನ್ನು ವೀಕ್ಷಿಸಲು ಅಯೋಧ್ಯಾ ಸುತ್ತಲೂ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿತ್ತು. ಶಿಲಾನ್ಯಾಸ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುತ್ತಿರುವುದರಿಂದ ಇಡೀ ಅಯೋಧ್ಯಾ ನಗರದ ಭದ್ರತಾ ವ್ಯವಸ್ಥೆಯನ್ನು ಹೆಚ್ಚಿಸಲಾಗಿತ್ತು.

Last Updated : Aug 5, 2020, 1:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.