ETV Bharat / bharat

ಬೈಡನ್​ಗೆ ಮೋದಿ ಅಭಿನಂದನೆ: ಕಾರ್ಯತಂತ್ರಾತ್ಮಕ ಸಹಭಾಗಿತ್ವ ಮುಂದುವರಿಕೆ ಬಗ್ಗೆ ಚರ್ಚೆ - ಪ್ರಧಾನಿ ನರೇಂದ್ರ ಮೋದಿ ಟ್ವೀಟ್

ಕೋವಿಡ್​-19 ಸಾಂಕ್ರಾಮಿಕ, ಹವಾಮಾನ ಬದಲಾವಣೆ ಮತ್ತು ಇಂಡೋ-ಪೆಸಿಫಿಕ್ ಭಾಗದಲ್ಲಿನ ಸಹಕಾರ ವೃದ್ಧಿ ಕುರಿತಂತೆ ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡನ್ ಜೊತೆ ಪಿಎಂ ಮೋದಿ ಚರ್ಚಿಸಿದರು.

pm-modi-speaks-to-us-president-elect-joe-biden-discusses-cooperation
ಬೈಡನ್​ ಜೊತೆ ಮೋದಿ ಮಾತುಕತೆ
author img

By

Published : Nov 18, 2020, 2:46 AM IST

Updated : Nov 18, 2020, 4:54 AM IST

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡನ್ ಅವರಿಗೆ ದೂರವಾಣಿ ಕರೆ ಮೂಲಕ ಅಭಿನಂದಿಸಿದ್ದಾರೆ. ಇದೇ ವೇಳೆ ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವದ ಕುರಿತಂತೆ ದೃಢವಾದ ಬದ್ಧತೆ ಮುಂದುವರಿಸುವ ಹಾಗೂ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಚರ್ಚಿಸಿದ್ದಾರೆ.

  • Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns - Covid-19 pandemic, climate change, and cooperation in the Indo-Pacific Region.

    — Narendra Modi (@narendramodi) November 17, 2020 " class="align-text-top noRightClick twitterSection" data=" ">

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಕೋವಿಡ್​-19 ಸಾಂಕ್ರಾಮಿಕ, ಹವಾಮಾನ ಬದಲಾವಣೆ ಮತ್ತು ಇಂಡೋ-ಪೆಸಿಫಿಕ್ ಭಾಗದಲ್ಲಿನ ಸಹಕಾರ ವೃದ್ಧಿ ಕುರಿತಂತೆ ಮಾತನಾಡಿರುವುದಾಗಿ ಎಂದು ಪಿಎಂ ತಿಳಿಸಿದ್ದಾರೆ.

ಮತ್ತೊಂದು ಟ್ವೀಟ್​​ ಮೂಲಕ ಯುಸ್​ ಉಪಾಧ್ಯಕ್ಷರಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ಮೋದಿ ಅಭಿನಂದನೆ ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಕ್ಕೆ ಇನ್ನಷ್ಟು ಶಕ್ತಿ ನೀಡಲಿದೆ. ಅವರ ಗೆಲುವು ಭಾರತೀಯ-ಅಮೆರಿಕನ್ ಸಮುದಾಯದ ಸದಸ್ಯರಿಗೆ ಬಹಳ ಹೆಮ್ಮೆ ಮತ್ತು ಪ್ರೇರಣೆಯಾಗಿದೆ ಎಂದು ಪಿಎಂ ಹೇಳಿದ್ದಾರೆ.

  • I also conveyed warm congratulations for VP-elect @KamalaHarris. Her success is a matter of great pride and inspiration for members of the vibrant Indian-American community, who are a tremendous source of strength for Indo-US relations.

ಬೈಡನ್ ಗೆಲುವು ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು, ಮತ್ತೊಮ್ಮೆ ಯುಎಸ್ ನಾಯಕನೊಂದಿಗೆ ನಿಕಟ ಕಾರ್ಯ ನಿರ್ವಹಿಸಲು ಎದುರು ನೋಡುತ್ತಿದ್ದೇನೆ. ಇಂಡೋ-ಯುಎಸ್ ಸಂಬಂಧವನ್ನು ಬಲಪಡಿಸಲು ಈ ಹಿಂದೆ ಉಪಾಧ್ಯಕ್ಷರಾಗಿದ್ದ ವೇಳೆ ಬೈಡನ್​ ನೀಡಿದ ಕೊಡುಗೆ ನಿರ್ಣಾಯಕ ಮತ್ತು ಅಮೂಲ್ಯವಾದವು ಎಂದು ಅವರು ಹೇಳಿದ್ದಾರೆ.

Last Updated : Nov 18, 2020, 4:54 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.