ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಸಮಿತಿ ಸಭೆ (ECOSOC -United Nations Economic and Social Council) ಉದ್ದೇಶಿಸಿ ಮಾತನಾಡಲಿದ್ದಾರೆ.
ಭಾರತ ವಿಶ್ವಸಂಸ್ಥೆಯ ವಿಟೋ ಅಧಿಕಾರ ಹೊಂದಿರದ ಭದ್ರತಾ ಮಂಡಳಿ ಖಾಯಂ ಅಲ್ಲದ ಸದಸ್ಯರಾಗಿ ಆಯ್ಕೆ ಆದ ಬಳಿಕ ಭಾರತದ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದಿ ಇದೇ ಮೊದಲ ಬಾರಿಗೆ ವಿಶ್ವಸಂಸ್ಥೆಯ ಆರ್ಥಿಕ ಮತ್ತು ವಾರ್ಷಿಕ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಲಿದ್ದಾರೆ.
ನ್ಯೂಯಾರ್ಕ್ನ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ನಡೆಯುವ ಉನ್ನತ ಮಟ್ಟದ ಸಭೆ ಉದ್ದೇಶಿಸಿ ಪ್ರಧಾನಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 9.30 ರಿಂದ ಬೆಳಗ್ಗೆ 11.30 ರವರೆ (ಸ್ಥಳೀಯ ಸಮಯ) ಮುಖ್ಯ ಭಾಷಣ ಮಾಡಲಿದ್ದಾರೆ.
ಈ ಸಭೆಯಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಹಾಗೂ ನಾರ್ವೆ ಪ್ರಧಾನಿ ಉಪಸ್ಥಿತರಿರಲಿದ್ದಾರೆ.